ಬೆಂಗಳೂರು : ಪೌರ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, 11 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಬಿಬಿಎಂಪಿಯಲ್ಲಿ ನೇರ ಪಾವತಿಯಡಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಕಾಯಂಗೊಳಿಸಲು ಸೃಜಿಸಲಾಗಿರುವ 11,307 ಪೌರಕಾರ್ಮಿಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲು ಸರ್ಕಾರ ನಿರ್ಧರಿಸಿದೆ, ಈ ವೇಳೆ ಅರ್ಹ ಸಾಮಾನ್ಯ ವರ್ಗ ಹಾಗೂ ಹಿಂದುಳಿದ ವರ್ಗಗಳ ಅಭ್ಯ ರ್ಥಿಗಳು ಲಭ್ಯವಾಗದಿದ್ದರೆ ಆ ಹುದ್ದೆಗೂ ಅರ್ಹ ಎಸ್ಸಿ/ಎಸ್ಟಿ ಅಭ್ಯರ್ಥಿ ನೇಮಿಸಿಕೊಳ್ಳಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿದು ಬಂದಿದೆ.
ಇನ್ನೂ, ಜಲಜೀವನ್ ಮಿಷನ್ ಯೋಜನೆಯಡಿ ರಾಜ್ಯದ 369 ಗ್ರಾಮಗಳಿಗೆ 980 ಕೋಟಿ ರು.ಗಳ ವೆಚ್ಚದಲ್ಲಿ ಕುಡಿಯುವ ನೀರು ಒದಗಿಸುವ ಯೋಜನೆಗಳನ್ನು ಆರಂಭಿಸಲು ಹಾಗೂ ಬೆಂಗಳೂರಿನಲ್ಲಿ 50 ಕೋಟಿ ರು. ವೆಚ್ಚದಲ್ಲಿ ಹೆಲ್ತ್ ಟೆಕ್ ಮತ್ತು ಮೆಡ್ ಟೆಕ್ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ ಸೇರಿದಂತೆ ವಿವಿಧ ಯೋಜನೆಗಳಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.