ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ 1 ತಿಂಗಳಲ್ಲೇ ಬರೋಬ್ಬರಿ 1.09 ಕೋಟಿ ಗ್ರಾಹಕರು ನೋಂದಣಿ ಮಾಡಿಸಿಕೊಂಡಿದ್ದಾರೆ.
ರಾಜ್ಯದಲ್ಲಿ 2.14 ಕೋಟಿ ಗ್ರಾಹಕರು 200 ಯೂನಿಟ್ ಗಿಂದ ಕಡಿಮೆ ಬಳಸುವವರಿದ್ದಾರೆ. ಅದರಲ್ಲಿ 1.80 ಕೋಟಿ ಸಕ್ರಿಯ ಸಂಪರ್ಕಗಳಿವೆ.ಈ ಪೈಕಿ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭವಾದ ಒಂದು ತಿಂಗಳಲ್ಲಿ 1,09,73,659 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ 1.75 ಕೋಟಿ ಗ್ರಾಹಕರು ಗೃಹಜ್ಯೋತಿ ಯೋಜನೆಗೆ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಅಂದಾಜಿಸಲಾಗಿದ್ದು, ನೋಂದಣಿ ಪ್ರಕ್ರಿಯೆಯಲ್ಲಿ ಶೇ. 60 ರಷ್ಟು ಅರ್ಜಿಗಳು ಬಂದಿದ್ದು, ಇನ್ನೂ 5 ರಿಂದ 10 ರಷ್ಟು ಹೆಚ್ಚಳವಾಗಬಹುದು ಎನ್ನಲಾಗಿದೆ.