ಬೆಂಗಳೂರು : ಯಜಮಾನಿ ಮಹಿಳೆಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ 2 ನೇ ಕಂತಿನ ಹಣವನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ.
ರಾಜ್ಯದ ಯಜಮಾನಿ ಮಹಿಳೆಯರಿಗೆ ಪ್ರೋತ್ಸಾಹಿಸೋ ಸಲುವಾಗಿ ಸರ್ಕಾರ ಜಾರಿಗೆ ತಂದಿರುವಂತ ಯೋಜನೆಗಳಲ್ಲಿ ಒಂದು ಗೃಹಲಕ್ಷ್ಮಿ. ಈ ಯೋಜನೆಯ ಅಡಿಯಲ್ಲಿ ಕುಟುಂಬದ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ.ಹಣವನ್ನು ಡಿಬಿಟಿ ಮೂಲಕ ನೋಂದಾಯಿತ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ.
ಈಗಾಗಲೇ 2 ಕಂತಿನ ಹಣವನ್ನು ಅರ್ಹ ಯಜಮಾನಿಯರ ಖಾತೆಗೆ ಜಮಾ ಮಾಡಲಾಗಿದ್ದು, ಹಣ ಜಮೆ ಆಗಿರುವ ಕುರಿತಂತೆ ನೋಂದಾಯಿತ ಮೊಬೈಲ್ ಸಂಖ್ಯೆಗೆ ಸಂದೇಶ ಬಂದಿದೆ. ಸಂದೇಶ ಬಂದವರ ಖಾತೆಗೆ ರಾಜ್ಯ ಸರ್ಕಾರದಿಂದ ಅರ್ಹ ಫಲಾನುಭವಿ ಯಜಮಾನಿ ಮಹಿಳೆಯರ ಜಮಾ ಮಾಡಲಾಗಿದೆ.
ನಿಮ್ಮ ಖಾತೆಗೆ ಹಣ ಜಮಾ ಆಗಿದೆಯಾ ಅಂತ ಈ ರೀತಿ ಪರಿಶೀಲಿಸಿಕೊಳ್ಳಿ..
ಗೃಹಲಕ್ಷ್ಮಿ ಮೊತ್ತವನ್ನು ನಿಮ್ಮ ಖಾತೆಗೆ ಜಮಾ ಮಾಡಲಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು ನೀವು ಮೊದಲು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು. https://ahara.kar.nic.in/
ನೀವು ಈಗ ಮುಖ್ಯ ಪುಟದಲ್ಲಿ ಮೊತ್ತ ಸ್ಥಿತಿ ಆಯ್ಕೆಗೆ ಹೋಗಬೇಕು.
ನಂತರ ನೀವು ನಿಮ್ಮ ಪಡಿತರ ಚೀಟಿಯಲ್ಲಿ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ.
ಗೃಹಲಕ್ಷ್ಮಿ ಮೊತ್ತದ ಸಂಪೂರ್ಣ ಮಾಹಿತಿ ಈಗ ನಿಮ್ಮ ಮುಂದೆ ಕಾಣಿಸುತ್ತದೆ. ನೀವು ಇದನ್ನು ತ್ವರಿತವಾಗಿ ಪರಿಶೀಲಿಸಬಹುದು.