alex Certify ನಾಳೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ : ಮೈಸೂರು ನಗರದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ : ಮೈಸೂರು ನಗರದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ

ಮೈಸೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಆರ್ಥಿಕ ನೆರವು ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರ ನಾಳೆ  ಮೈಸೂರಿನಲ್ಲಿ ರಾಜ್ಯ ಸರ್ಕಾರ  ಅಧಿಕೃತವಾಗಿ ಚಾಲನೆ ನೀಡಲಿದೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಾಲ್ಗೊಳ್ಳಲಿದ್ದಾರೆ.

ಗೃಹಲಕ್ಷ್ಮೀ ಯೋಜನೆಯಡಿ ನಾಳೆ ಐದು ಜಿಲ್ಲೆಯ ಫಲಾನುಭವಿಗಳ ಖಾತೆಗೆ 2 ಸಾವಿರ ರೂ. ಖಾತೆಗೆ ವರ್ಗಾವಣೆ ಮಾಡಲಿದ್ದಾರೆ. ರಾಹುಲ್ ಗಾಂಧಿ ದೆಹಲಿಯಿಂದ ಬುಧವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿದ್ದು, ಅಲ್ಲಿಂದ ಮೈಸೂರಿಗೆ ತೆರಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ರಾಹುಲ್ ಗಾಂಧಿ ಅವರು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈಗಾಗಲೇ ಬೃಹತ್​ ವೇದಿಕೆ ನಿರ್ಮಾಣವಾಗುತ್ತಿದೆ. ನಾಳೆಯ ಕಾರ್ಯಕ್ರಮದ ಸುತ್ತಮುತ್ತ ವಾಹನ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ವಾಹನ ಸಂಚಾರ ನಿರ್ಬಂಧಿಸಿ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...