ಬೆಂಗಳೂರು : ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಅನರ್ಹ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಅನರ್ಹ ಫಲಾನುಭವಿಗಳು ನೋಂದಣಿ ಮಾಡಿ ಸೌಲಭ್ಯ ಪಡೆದಲ್ಲಿ ಅಂತಹವರ ವಿರುದ್ಧ ಕಾನೂನು ರೀತ್ಯಾ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಸೇವಾಕೇಂದ್ರ, ನಗರ ಪ್ರದೇಶಗಳಿಗೆ ಸಂಬಂಧಿಸಿದಂತೆ ವಾರ್ಡ್ ಕಚೇರಿ ನೋಂದಣಿ ಕೇಂದ್ರದಲ್ಲಿ ನಿಗದಿಪಡಿಸಿರುವ ಫಲಾನುಭವಿಗಳ ವೇಳಾ ಪಟ್ಟಿಯಂತೆ ಸೇವಾಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಉಚಿತವಾಗಿ ನೋಂದಣಿ ಮಾಡಲಾಗುತ್ತಿದ್ದು, ಬಾಹ್ಯಮೂಲದ ಯಾವುದೇ ಅಪ್ಲಿಕೇಷನ್ ಅಥವಾ ವೆಬ್ಸೈಟ್ ಮೂಲಕ ನೋಂದಣಿ ಮಾಡಲು ಅವಕಾಶ ಇರುವುದಿಲ್ಲ.
ಗೃಹಲಕ್ಷ್ಮೀ ನೋಂದಣಿ ವೇಳಾಪಟ್ಟಿಯನ್ನು ಸೇವಾಸಿಂಧು ಪೋರ್ಟಲ್ನಲ್ಲಿ ಪಡಿತರ ಚೀಟಿ ಸಂಖ್ಯೆ ನಮೂದಿಸಿ ಹಾಗೂ ದೂರವಾಣಿ ಸಂಖ್ಯೆ 8147500500ಗೆ ಪಡಿತರಚೀಟಿ ಸಂಖ್ಯೆಯನ್ನು ಎಸ್ಎಂಎಸ್ ಮಾಡುವ ಮೂಲಕ ತಿಳಿದುಕೊಳ್ಳಬಹುದಾಗಿರುತ್ತದೆ.