ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಹಣದಿಂದ ವಿದ್ಯಾರ್ಥಿಗಳಿಗಾಗಿ ಗ್ರಂಥಾಲಯ ನಿರ್ಮಿಸಿರುವ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮಂಟೂರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಮಲ್ಲವ್ವ ಮೇಟಿ ಅವರ ಕಾರ್ಯವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶ್ಲಾಘಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಲ್ಲವ್ವ ಮೇಟಿ ಅವರ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದೆ. ಮಲ್ಲವ್ವ ಮೇಟಿ ಕಾರ್ಯನೋಡಿದರೆ ಸಾವಿತ್ರಿಬಾಯಿ ಪುಲೆ ಬಳಿಕ ಆಧುನಿಕ ಅಕ್ಷರದ ಅವ್ವ ಎನ್ನಬಹುದು ಎಂದರು.
ಈ ಗ್ರಂಥಾಲಯ ವಿದ್ಯಾರ್ಥಿಗಳ ಪಾಲಿಗೆ ಆಶಾಕಿರಣವಾಗಲಿ. ಇದರ ಸದುಪಯೋಗವನ್ನು ಎಲ್ಲರೂ ಪಡೆಯುವಂತಾಗಲಿ ಎಂಂದು ಸಚಿವರು ಹಾರೈಸಿದರು. ಇದೇ ವೇಳೆ ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ‘ಕಾನೂರು ಹೆಗ್ಗಡತಿ’ ಪುಸ್ತಕವನ್ನು ಗ್ರಂಥಾಲಯಕ್ಕೆ ಉಡುಗೊರೆ ನೀಡಿದರು.