ಬೆಂಬಲ ಬೆಲೆ ಯೋಜನೆಯಡಿ ಕಡಲೇಕಾಳು ಖರೀದಿ : ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : ಪ್ರಸ್ತಕ ಸಾಲಿನ ಹಿಂಗಾರು ಹಂಗಾಮಿನ ಎಫ್ಎಕ್ಯೂ ಗುಣಮಟ್ಟದ ಕಡಲೇಕಾಳು ಉತ್ಪನ್ನವನ್ನು ಬೆಂಬಲ ಬೆಲೆ ಯೋಜನೆಯಡಿ ಬೆಂಗಳೂರಿನ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತ, ಬಳ್ಳಾರಿ ಶಾಖೆ ವತಿಯಿಂದ ಖರೀದಿಸಲಾಗುತ್ತಿದೆ ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ನಿಗಧಿಪಡಿಸಿದ ಬೆಂಬಲ ಬೆಲೆಯಂತೆ ಪ್ರತಿ ಕ್ವಿಂಟಾಲ್ಗೆ ರೂ.5,650 ರಂತೆ ರೈತರಿಂದ ಖರೀದಿಸಲಾಗುತ್ತದೆ.

*ಖರೀದಿ ಕೇಂದ್ರಗಳು:

ಬಳ್ಳಾರಿ ನಗರದ ಎಸ್ಪಿ ವೃತ್ತದ ಹತ್ತಿರದ ಮಾರುತಿ ನಗರದ 2ನೇ ಕ್ರಾಸ್ನ ರೈತರ ಸೇವಾ ಸಹಕಾರ ಸಂಘ ನಿಯಮಿತ (ಮೊ.9900559927).ಸಿರುಗುಪ್ಪ ಪಟ್ಟಣದ ಪಿಎಲ್ಡಿ ಬ್ಯಾಂಕ್ ಕಟ್ಟಡದ ಪಶು ಆಸ್ಪತ್ರೆ ಪಕ್ಕದಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ಮೊ.9845166601).

*ಬೇಕಾದ ದಾಖಲೆ:

ಆಧಾರ್ಕಾರ್ಡ್, ಪ್ರಸ್ತಕ ಸಾಲಿನ ಪಹಣಿ ಪತ್ರ, ಎಫ್ಐಡಿ ಕಡ್ಡಾಯ, ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾAಶದಲ್ಲಿ ಹೆಸರು ನೋಂದಾಯಿಸಿರಬೇಕು. ಬ್ಯಾಂಕ್ ಖಾತೆ ಪುಸ್ತಕದ ನಕಲು ಪ್ರತಿ.
ರೈತರಲ್ಲಿ ಫ್ರೂಟ್ಸ್ ಐಡಿ ಇಲ್ಲದೇ ಇದ್ದಲ್ಲಿ ಅಥವಾ ಫ್ರೂಟ್ಸ್ ನಲ್ಲಿ ಯಾವುದಾದರೂ ತಾಂತ್ರಿಕ ದೋಷವಿದ್ದಲ್ಲಿ ರೈತರು ಕೃಷಿ ಇಲಾಖೆ ಸಂಪರ್ಕಿಸಿ ಅವಶ್ಯಕ ಮಾಹಿತಿ ಪಡೆಯಬಹುದು.

ಒಣಗಿದ ಹಾಗೂ ಸ್ವಚ್ಛ ಎಫ್ಎಕ್ಯೂ ಗುಣಮಟ್ಟದ ಕಡಲೇಕಾಳು ಉತ್ಪನ್ನವನ್ನು ಕೇಂದ್ರಕ್ಕೆ ಮಾರಾಟ ಮಾಡಲು ತರಬೇಕು. ಕಡಲೇಕಾಳು ಖರೀದಿ ಕೇಂದ್ರಗಳಲ್ಲಿ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಹಾಗೂ ನೋಂದಣಿ ಚೀಟಿ ಪಡೆಯಬೇಕು.

ನಿಗಧಿತ ಅವಧಿಯೊಳಗೆ ನೋಂದಾಯಿಸಿಕೊಂಡ ರೈತರಿಂದ ಪ್ರತಿ ಎಕರೆಗೆ 04 ಕ್ವಿಂಟಾಲ್ನಿAದ ಗರಿಷ್ಠ 20 ಕ್ವಿಂಟಾಲ್ ಮಾತ್ರ ಖರೀದಿಸಲಾಗುವುದು. ಕಡಲೇಕಾಳು ಉತ್ಪನ್ನವನ್ನು 90 ದಿನಗಳವರೆಗೆ ಬೆಳಿಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಮಾತ್ರ ಖರೀದಿಸಲಾಗುತ್ತದೆ.ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು, ರೈತರೇ ನೇರವಾಗಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read