
ಬೆಂಗಳೂರು: ಮನೆ ಬಾಗಿಲಿಗೆ ಆರೋಗ್ಯ ಸೇವೆ ಒದಗಿಸುವ ಗೃಹ ಆರೋಗ್ಯ ಯೋಜನೆಯ ಮೊದಲ ಹಂತ ಮುಂದಿನ ತಿಂಗಳು ಆರಂಭವಾಗಲಿದೆ.
ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ ಗೃಹ ಆರೋಗ್ಯ ಯೋಜನೆ ಆರಂಭಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದು, ಗೃಹ ಆರೋಗ್ಯ ಯೋಜನೆ ಆರಂಭಿಸುವ ದಿನಾಂಕವನ್ನು ಬುಧವಾರ ನಿರ್ಧರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಮಧುಮೇಹ, ಅಧಿಕ ರಕ್ತದೊತ್ತಡ ಸೇರಿ ಇತರೆ ಆರೋಗ್ಯ ಸಮಸ್ಯೆ ಇರುವವರಿಗೆ ಅನೇಕ ಬಾರಿ ನಿಯಮಿತವಾಗಿ ಮಾತ್ರೆ ಸೇವಿಸಲು ಸಾಧ್ಯವಾಗುವುದಿಲ್ಲ. ಗೃಹ ಆರೋಗ್ಯ ಯೋಜನೆಯ ಮೂಲಕ ಇಂತಹ ಸಮಸ್ಯೆ ಇರುವವರಿಗೆ ಮೂರು ತಿಂಗಳಿಗೆ ಆಗುವಷ್ಟು ಮಾತ್ರೆಗಳನ್ನು ಮನೆಗಳಿಗೆ ನೇರವಾಗಿ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
ಡಯಾಬಿಟಿಕ್, ಪ್ರಿ –ಡಯಾಬಿಟಿಕ್ ಪತ್ತೆ ಹಚ್ಚುವ ನಿಟ್ಟಿನಲ್ಲಿ ಜಿಲ್ಲಾ ಆಸ್ಪತ್ರೆಗಳಲ್ಲಿ ಸಮುದಾಯ ಮಧುಮೇಹ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.