ಬೆಂಗಳೂರು: ಗೃಹಜ್ಯೋತಿ ಯೋಜನೆಗೆ 13,910 ಕೋಟಿ ರೂಪಾಯಿ ಅನುದಾನ ಕಾಯ್ದಿರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ಗೃಹಜ್ಯೋತಿ ಯೋಜನೆಯಡಿ ರಾಜ್ಯದ ಪ್ರತಿ ಮನೆಗೆ ತಿಂಗಳಿಗೆ ಅವರ ವಾರ್ಷಿಕ ಸರಾಸರಿ ಬಳಕೆ ಜೊತೆಗೆ ಗರಿಷ್ಠ 100 ಹೆಚ್ಚುವರಿ ಯುನಿಟ್ ಬಳಕೆಯ ವಿದ್ಯುತ್ ಉಚಿತವಾಗಿ ಸಿಗಲಿದೆ ಎಂದು ಸಿಎಂ ಹೇಳಿದ್ದಾರೆ.
ಶುಕ್ರವಾರದವರೆಗೆ 1.3 ಕೋಟಿ ಮಂದಿ ಗೃಹಜ್ಯೋತಿ ಯೋಜನೆಗೆ ನೋಂದಣಿ ಮಾಡಿಸಿಕೊಂಡಿದ್ದು, ಜುಲೈ 1 ರಿಂದ ಬಳಕೆಯಾಗುವ ವಿದ್ಯುತ್ ಬಿಲ್ ಗೆ ಇದು ಅನ್ವಯವಾಗುತ್ತದೆ. 200 ಯೂನಿಟ್ ವರೆಗಿನ ವಿದ್ಯುತ್ ಬಳಸುತ್ತಿರುವ ಗ್ರಾಹಕರಿಗೆ ಯೋಜನೆಯ ಲಾಭ ಸಿಗಲಿದ್ದು, ಎರಡು ಕೋಟಿಗಿಂತ ಅಧಿಕ ಗೃಹ ಬಳಕೆದಾರರಿಗೆ ಅನುಕೂಲವಾಗುತ್ತದೆ. ಈ ಯೋಜನೆ ಜಾರಿಗೆ ವಾರ್ಷಿಕ 13,910 ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಕಾಯ್ದಿರಿಸಲಾಗಿದೆ.