alex Certify Gruha Jyoti Scheme : ಗಮನಿಸಿ : ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಅವಧಿ ಜುಲೈ 27 ರವರೆಗೆ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Gruha Jyoti Scheme : ಗಮನಿಸಿ : ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಅವಧಿ ಜುಲೈ 27 ರವರೆಗೆ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರದ ಉಚಿತ ‘ಗೃಹಜ್ಯೋತಿ’ ಯೋಜನೆಗೆ ಸರ್ಜಿ ಸಲ್ಲಿಕೆ ಅವಧಿ ಜುಲೈ 27 ರವರೆಗೆ ವಿಸ್ತರಣೆ ಮಾಡಲಾಗಿದೆ.

ಜನರು ಸೇವಾಸಿಂಧು ಪೋರ್ಟಲ್, ಬೆಂಗಳೂರು ಒನ್, ಗ್ರಾಮ್ ಒನ್ ಮತ್ತು ಕರ್ನಾಟಕ ಒನ್ ಕೇಂದ್ರ ಅಥವಾ ಯಾವುದೇ ವಿದ್ಯುತ್ ಕಛೇರಿಗಳಲ್ಲಿಯೂ ಸಹ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿದೆ. ಇಂಧನ ಇಲಾಖೆ ಗೃಹಜ್ಯೋತಿ ಯೋಜನೆ ಸರ್ಜಿ ಸಲ್ಲಿಕೆಗೆ ನಿಗದಿಪಡಿಸಿದ್ದ ಅವಧಿಯನ್ನು ಜುಲೈ 25 ರಿಂದ 27ಕ್ಕೆ ವಿಸ್ತರಿಸಿದೆ. ಒಟ್ಟಾರೆ ಗೃಹಜ್ಯೋತಿಗೆ ಅರ್ಜಿ ಸಲ್ಲಿಸಲು ಯಾವುದೇ ಡೆಡ್ ಲೈನ್ ಇಲ್ಲ ಎಂದಿದ್ದಾರೆ.

ಗೃಹಜ್ಯೋತಿ ನೋಂದಣಿಗೆ ಕೊನೆ ದಿನಾಂಕ ಇಲ್ಲವಾದರೂ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಬರುವ ಜುಲೈ ತಿಂಗಳ ವಿದ್ಯುತ್ ಬಳಕೆಯ ಬಿಲ್ ಝೀರೋ ಬರಬೇಕಾದರೆ ಅದಕ್ಕಿಂತ ಮೊದಲು ನೋಂದಣಿ ಮಾಡಿಕೊಳ್ಳಬೇಕು. ಜುಲೈ 27 ರ ಒಳಗೆ ಅಂತಿಮ ಗಡುವು ನೀಡಲಾಗಿದೆ. ಈ ದಿನಾಂಕದೊಳಗೆ ನೀವು ನೋಂದಣಿ ಮಾಡದಿದ್ದರೆ ಎಂದಿನಂತೆ ರೆಗ್ಯೂಲರ್ ಬಿಲ್ ಬರುತ್ತದೆ. ಆದ್ದರಿಂದ ಜುಲೈ 27 ರೊಳಗೆ ಅರ್ಜಿ ಸಲ್ಲಿಸಿ ಎಂದು ಇಂಧನ ಇಲಾಖೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಾನು ನೀಡಿದ್ದ ಭರವಸೆಯಂತೆ ಕಾಂಗ್ರೆಸ್ ಸರ್ಕಾರ, 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ‘ಗೃಹಜ್ಯೋತಿ’ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿದ್ದು, ಅರ್ಜಿ ಸ್ವೀಕಾರ ಆರಂಭವಾಗಿದೆ.ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಂಡವರು ತಮ್ಮ ಅರ್ಜಿಯ ಸ್ಥಿತಿಗತಿ ಪರಿಶೀಲಿಸುವ ಸಲುವಾಗಿ ಇಂಧನ ಇಲಾಖೆ, ಅಂತರ್ಜಾಲ ಲಿಂಕ್ ಬಿಡುಗಡೆ ಮಾಡಿದ್ದು ಇದರ ಮಾಹಿತಿ ಇಲ್ಲಿದೆ.
ಈಗಾಗಲೇ ಅರ್ಜಿ ಸಲ್ಲಿಸಿರುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in/statucTrack/Track_Status ಮೂಲಕ ಪರಿಶೀಲಿಸಿಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...