ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಜುಲೈ ತಿಂಗಳ ನೋಂದಣಿಗೆ ಗಡುವು ಮುಕ್ತಾಯವಾಗಿದ್ದು, ಗೃಹಜ್ಯೋತಿಗೆ ನೋಂದಣಿ ಮಾಡಿಸದವರು ಆಗಸ್ಟ್ ತಿಂಗಳಲ್ಲಿ ಬರುವ ಕರೆಂಟ್ ಬಿಲ್ ಕಟ್ಟಬೇಕು ಎಂದು ಇಂಧನ ಇಲಾಖೆ ತಿಳಿಸಿದೆ.
ಗ್ರಾಹಕರು ಜುಲೈ 27 ರೊಳಗೆ ಸೇವಾಸಿಂಧುವಿನಲ್ಲಿ ನೋಂದಾಯಿಸಿಕೊಳ್ಳಬೇಕು. ಈ ದಿನಾಂಕದೊಳಗೆ ನೋಂದಾಯಿಸಲು ವಿಫಲವಾದರೆ ಅವರನ್ನು ಜುಲೈ ತಿಂಗಳ ಯೋಜನೆಯಿಂದ ಹೊರಗಿಡಲಾಗುತ್ತದೆ, ಬಳಿಕ ಅವರನ್ನು ಆಗಸ್ಟ್ ನಿಂದ ಪ್ರಾರಂಭವಾಗುವ ಯೋಜನೆಗೆ ಪರಿಗಣಿಸಲಾಗುತ್ತದೆ. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇಲ್ಲ,
ಗೃಹಜ್ಯೋತಿ ಯೋಜನೆಗೆ ಈಗಾಗಲೇ 1.16 ಕೋಟಿಗೂ ಹೆಚ್ಚು ಜನ ನೋಂದಣಿಯನ್ನು ಮಾಡಿಸಿಕೊಂಡಿದ್ದಾರೆ. ಆದರೆ, ರಾಜ್ಯದಲ್ಲಿ 2.14 ಕೋಟಿ ಉಚಿತ ವಿದ್ಯತ್ ನ ಪಲಾನುಭವಿಗಳಿದ್ದು, ಇನ್ನೂ ಕೋಟಿಗೂ ಅಧಿಕ ಮಂದಿ ನೋಂದಣಿಯನ್ನು ಮಾಡಿಕೊಳ್ಳಬೇಕಿದೆ.
ಜೂನ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಿದವರಿಗೆ ಜುಲೈ ತಿಂಗಳಿನಿಂದ ಉಚಿತ ವಿದ್ಯುತ್ ನೀಡಲಾಗುತ್ತದೆ. , ಜುಲೈ ತಿಂಗಳಿನಲ್ಲಿ ಅರ್ಜಿ ಸಲ್ಲಿಸಿದ್ರೆ ಆಗಸ್ಟ್ ತಿಂಗಳಿನಿಂದ ಉಚಿತ ವಿದ್ಯುತ್ ನೀಡಲಾಗುತ್ತದೆ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡರೆ ಉಚಿತ ವಿದ್ಯುತ್ ನೀಡುವುದಿಲ್ಲ, ಬಾಕಿ ಹಣವನ್ನು ಕಟ್ಟಲೇಬೇಕು ಎಂದು ಇಂಧನ ಇಲಾಖೆಯ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.