alex Certify Gruha Jyoti Scheme : ಮನೆ ಬದಲಾಯಿಸಿದ ನಂತರವೂ ಉಚಿತ ‘ವಿದ್ಯುತ್ ಸೌಲಭ್ಯ’ ಪಡೆಯಲು ಜಸ್ಟ್ ಹೀಗೆ ಮಾಡಿ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Gruha Jyoti Scheme : ಮನೆ ಬದಲಾಯಿಸಿದ ನಂತರವೂ ಉಚಿತ ‘ವಿದ್ಯುತ್ ಸೌಲಭ್ಯ’ ಪಡೆಯಲು ಜಸ್ಟ್ ಹೀಗೆ ಮಾಡಿ.!

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿಯು ಜಾರಿಯಾಗಿ ಒಂದು ವರ್ಷ ಪೂರೈಸಿದೆ. ಇದೇ ಸಮಯದಲ್ಲಿ ಇಂಧನ ಇಲಾಖೆಯು ಗೃಹಜ್ಯೋತಿ ಗ್ರಾಹಕರಿಗಾಗಿ ಮನೆ ಬದಲಾಯಿಸಿದ ನಂತರವೂ ಉಚಿತ ವಿದ್ಯುತ್ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸಿದೆ.

ಹಳೆ ಮನೆಯ ಆರ್ ಆರ್ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಹೊಸ ಮನೆಯ ಸಂಖ್ಯೆಯನ್ನು ಲಿಂಕ್ ಮಾಡುವ ಮೂಲಕ ಗೃಹಜ್ಯೋತಿ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಸೇವಾ ಸಿಂಧು ಪೋರ್ಟಲ್ನ https://sevasindhu.karnataka.gov.in/GruhaJyothi_Delink/GetAadhaarData.aspx ವೆಬ್ಸೈಟ್ ಪ್ರವೇಶಿಸಿ ಆರ್ಆರ್ ಸಂಖ್ಯೆಯನ್ನು ಡಿ-ಲಿಂಕ್ ಮಾಡಬಹುದು.

ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory Clear ಮಾಡಿ ನಂತರ ಪೋರ್ಟಲ್ ಲಿಂಕ್ ಮಾಡಿ ಸೇವೆ ಪಡೆಯಬಹುದು.

ಮನೆ ಬದಲಾಯಿಸುವಾಗ ಈ ಹಿಂದೆ ಆ ಮನೆಯಲ್ಲಿ ವಾಸವಿದ್ದವರ ಆಧಾರ್ ಸಂಖ್ಯೆ ಜೊತೆ ಆರ್ಆರ್ ನಂಬರ್ ಲಿಂಕ್ ಆಗಿದೆಯೇ ಅಥವಾ ಅವರು ಡಿ-ಲಿಂಕ್ ಮಾಡಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕು. ಆಗಿರದಿದ್ದರೆ ಡಿ-ಲಿಂಕ್ ಮಾಡಿ, ಹೊಸದಾಗಿ ಆರ್ಆರ್ ನಂಬರ್ಗೆ ಆಧಾರ್ ಲಿಂಕ್ ಮಾಡಬೇಕು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...