ಬೆಂಗಳೂರು : ನೀವಿನ್ನೂ `ಗೃಹಜ್ಯೋತಿ’ಗೆ ಅರ್ಜಿ ಹಾಕಿಲ್ವಾ ? ಹಾಗಾದರೆ ಈಗಲೇ ಅರ್ಜಿ ಸಲ್ಲಿಸಿ. ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಲು ಇಂದು (ಜುಲೈ 27) ಕೊನೆಯ ದಿನಾಂಕವಾಗಿದೆ.‘ಗೃಹಜ್ಯೋತಿ’ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಡೆಡ್ ಲೈನ್ ಇಲ್ಲ, ಆದರೆ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ ಜುಲೈ 27 ರೊಳಗೆ ನೀವು ಅರ್ಜಿ ಸಲ್ಲಿಸಿಲ್ಲ ಅಂದ್ರೆ ನಿಮಗೆ ಉಚಿತ ವಿದ್ಯುತ್ ಸಿಗಲ್ಲ.
ಗೃಹಜ್ಯೋತಿ ನೋಂದಣಿಗೆ ಕೊನೆ ದಿನಾಂಕ ಇಲ್ಲವಾದರೂ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಬರುವ ಜುಲೈ ತಿಂಗಳ ವಿದ್ಯುತ್ ಬಳಕೆಯ ಬಿಲ್ ಝೀರೋ ಬರಬೇಕಾದರೆ ಅದಕ್ಕಿಂತ ಮೊದಲು ನೋಂದಣಿ ಮಾಡಿಕೊಳ್ಳಬೇಕು ಎಂದು ಜುಲೈ 27 ಗಡುವು ನೀಡಲಾಗಿತ್ತು. ಈ ದಿನಾಂಕದೊಳಗೆ ನೀವು ನೋಂದಣಿ ಮಾಡದಿದ್ದರೆ ಎಂದಿನಂತೆ ರೆಗ್ಯೂಲರ್ ಬಿಲ್ ಬರುತ್ತದೆ. ಆದ್ದರಿಂದ ಜುಲೈ 27 ರೊಳಗೆ ಅರ್ಜಿ ಸಲ್ಲಿಸಿ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದರು. ಆದ್ದರಿಂದ ಇಂದು ರಾತ್ರಿಯೊಳಗೆ ಗೃಹಜ್ಯೋತಿ’ಗೆ ನೀವು ಅರ್ಜಿ ಸಲ್ಲಿಸಿಬಿಡಿ.
ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಾನು ನೀಡಿದ್ದ ಭರವಸೆಯಂತೆ ಕಾಂಗ್ರೆಸ್ ಸರ್ಕಾರ, 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ‘ಗೃಹಜ್ಯೋತಿ’ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿದ್ದು, ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಂಡವರು ತಮ್ಮ ಅರ್ಜಿಯ ಸ್ಥಿತಿಗತಿ ಪರಿಶೀಲಿಸುವ ಸಲುವಾಗಿ ಇಂಧನ ಇಲಾಖೆ, ಅಂತರ್ಜಾಲ ಲಿಂಕ್ ಬಿಡುಗಡೆ ಮಾಡಿದ್ದು ಇದರ ಮಾಹಿತಿ ಇಲ್ಲಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in/statucTrack/Track_Status ಮೂಲಕ ಪರಿಶೀಲಿಸಿಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.