ಹುಬ್ಬಳ್ಳಿ: ಮಹಿಳೆಯರಿಗೆ ಮಾಸಿಕ 2000 ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಹಣ ಪಡೆದರೆ ಅಂತವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಹುಬ್ಬಳ್ಳಿ ಏರ್ ಪೋರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗೃಹಲಕ್ಷ್ಮಿ ಯೋಜನೆ ನೋಂದಣಿ ಉಚಿತವಾಗಿದ್ದು, ಅರ್ಜಿ ಸಲ್ಲಿಕೆಗೆ ಯಾವುದೇ ಹಣ ನೀಡುವಂತಿಲ್ಲ. ಅರ್ಜಿಗೆ ಹಣ ಪಡೆದರೆ ಅಂತವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಹೇಳಿದರು.
ಜುಲೈ 19ರಿಂದ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಕೆಲವೆಡೆ ಜನರಿಂದ ಹಣ ಪಡೆದು ಅರ್ಜಿ ಸಲ್ಲಿಕೆ ಮಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಹಣ ಪಡೆದರೆ ಕ್ರಿಮಿನಲ್ ಕೇಸ್ ಹಾಕಲಾಗುವುದು ಎಂದು ತಿಳಿಸಿದ್ದಾರೆ.