ಬೆಂಗಳೂರು : ಯಜಮಾನಿಯರಿಗೆ ಗುಡ್ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ಈ ತಿಂಗಳು ಶೇ.100 ರಷ್ಟು ಗೃಹಲಕ್ಷ್ಮಿ ಹಣ ಪಾವತಿಗೆ ಸರ್ಕಾರ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹೌದು, ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಹಣ ಸಂದಾಯ ಮಾಡಲು ಇರುವ ಎಲ್ಲಾ ತಾಂತ್ರಿಕ ತೊಂದರೆಗಳನ್ನು ಸರಿಪಡಿಸಿ ಶೇ 100 ಎಷ್ಟು ಗುರಿ ಮುಟ್ಟಲು ಕ್ರಮ ಕೈಗೊಳ್ಳಬೇಕೆಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳ ವಂತಿಕೆ ಇನ್ನೂ ಶೇ 100 ರಷ್ಟು ಪಾವತಿಯಾಗಿಲ್ಲ. ಹಂತ ಹಂತವಾಗಿ ಹಣ ಪಾವತಿಸಲಾಗುತ್ತಿದೆ. ಎಲ್ಲಾ ಫಲಾನುಭವಿಗಳಿಗೂ ಹಣ ಪಾವತಿಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಕಾಂಗ್ರೆಸ್ ಸರ್ಕಾರದ ಮಹತ್ವದ ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯ 2 ನೇ ಕಂತಿನ ಹಣ ಮನೆಯ ಯಜಮಾನಿಯರ ಖಾತೆಗೆ ಜಮೆ ಆಗಿದೆ.
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯಲು ಇ-ಕೆವೈಸಿ ಅಪ್ಡೇಟ್ ಮಾಡಿಸಲು ಸೂಚನೆ ನೀಡಲಾಗಿದೆ.ಯೋಜನೆಯಡಿ ಪಡಿತರ ಚೀಟಿ ಹೊಂದಿದ ‘ಕುಟುಂಬದ ಯಜಮಾನಿ’ ಎಂದು ಗುರುತಿಸಲ್ಪಟ್ಟ ಮಹಿಳೆಯರಿಗೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಆಗಸ್ಟ್ – 2023 ರಿಂದ ಮಾಹೆಯಾನ 2000 ರೂ.ಗಳನ್ನು ಡಿಬಿಟಿ ಮೂಲಕ ಹಣ ಜಮೆ ಮಾಡಲಾಗುತ್ತಿದೆ.