ಬೆಳಗಾವಿ : ರಾಜ್ಯ ಸರ್ಕಾರದ 4 ನೇ ಗ್ಯಾರಂಟಿ ಮನೆಯ ಯಜಮಾನಿಗೆ 2,000 ರೂ. ಮಾಸಾಶನ ನೀಡುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆ ದಿನಾಂಕ ಮತ್ತೆ ಮುಂದೂಡಿಕೆಯಾಗಿದ್ದು, ಆಗಸ್ಟ್ 29 ಅಥವಾ ಆ.30ಕ್ಕೆ ಚಾಲನೆ ನೀಡುತ್ತೇವೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 29 ಅಥವಾ 30 ಕ್ಕೆ ಚಾಲನೆ ನೀಡಲಾಗುವುದು ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೂರು ಈಗಾಗಲೇ ಈಡೇರಿಸಲಾಗಿದೆ. ಗೃಹಲಕ್ಷ್ಮೀ ಈ ಮಾಹೆಯಲ್ಲಿ ಜಾರಿಗೆ ತರಲಾಗುತ್ತಿದ್ದು, ಐದನೇ ಗ್ಯಾರಂಟಿ ಯುವ ನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಶಕ್ತಿ ಯೋಜನೆಯಡಿ ಇದುವರೆಗೆ 35 ಕೋಟಿ ಮಹಿಳೆಯರು ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಇದರಿಂದ ಸರಕಾರದ ಆದಾಯ ಕೂಡ ಹೆಚ್ಚಾಗಲಿದೆ.ರಾಜ್ಯದ 1.30 ಕೋಟಿಗೂ ಅಧಿಕ ಕುಟುಂಬಗಳಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ದೇಶದಲ್ಲೇ ಅಪರೂಪದ ಯೋಜನೆಯಾಗಿದೆ. ವರ್ಷಕ್ಕೆ 35 ಸಾವಿರ ಕೋಟಿ ರೂಪಾಯಿ ಇದಕ್ಕೆ ವಿನಿಯೋಗಿಸಲಾಗುವುದು ಎಂದರು.