ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ 2,000 ರೂ.ಗೆ ಕಾಯುತ್ತಿರುವ ಯಜಮಾನಿಯರು ತಪ್ಪದೇ ಕೆಳಗೆ ಕೊಟ್ಟಿರುವ ದಾಖಲೆಗಳನ್ನು ಪರಿಶೀಲಿಸಿ ಸರಿಪಡಿಸಿಕೊಂಡರೇ ಮುಂದಿನ ಕಂತಿನ ಹಣ ನಿಮ್ಮ ಖಾತೆಗೆ ಜಮಾ ಆಗಲಿದೆ.
ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ಜೋಡಣೆಯಾಗದೇ ಇ-ಕೆವೈಸಿ ಅಪ್ಡೇಟ್ ಆಗದೇ ಇರುವುದರಿಂದ ಹಣ ಜಮೆಯಾಗದೇ ಇರುವವರು ತಮ್ಮ ಖಾತೆ ಹೊಂದಿರುವ ಬ್ಯಾಂಕ್ಗಳಿಗೆ ಸಂಪರ್ಕಿಸಿ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ನೀಡಿ ಆಧಾರ್ ಜೋಡಣೆ ಮತ್ತು ಇಕೆವೈಸಿ ಅಪ್ಡೇಟ್ ಮಾಡಿಸಿಕೊಳ್ಳಬೇಕು.
ಫಲಾನುಭವಿಗಳು ಆಧಾರ್ ಕಾರ್ಡ್, ಪಡಿತರ ಚೀಟಿಯನ್ವಯ ಹಾಗೂ ಪಾಸ್ಪುಸ್ತಕದಲ್ಲಿರುವ ಖಾತೆದಾರರ ಹೆಸರು ಹೊಂದಾಣಿಕೆ ಮಾಡಿಸಿಕೊಳ್ಳುವಂತೆ ಯೋಜನೆಯ ಸೌಲಭ್ಯವನ್ನು ಪಡೆಯುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ.
ನಿಮ್ಮ ರೇಷನ್ ಕಾರ್ಡ್ ಗೆ KYC ಅಪ್ಡೇಟ್ ಆಗಿದೆಯೋ ಇಲ್ವಾ ಎಂಬುದನ್ನು ಮೊದಲು ತಿಳಿದುಕೊಳ್ಳಿ.ಆಗದೇ ಇದ್ದಲ್ಲಿ ಕೂಡಲೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗುವ ಮೂಲಕ KYC ಅಪ್ಡೇಟ್ ಮಾಡಿಸಿಕೊಳ್ಳಿ.ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿಕೊಂಡಿರುವ ಫಲಾನುಭವಿಗಳಲ್ಲಿ ಯಾರಿಗೆ ಮೊದಲ ಎರಡು ಕಂತಿನ ಹಣ ಬಂದಿಲ್ಲ ಅಂತಹವರು ತಮ್ಮ ಬ್ಯಾಂಕ್ಗಳಲ್ಲಿ ಇ-ಕೆವೈಸಿ ಹಾಗೂ ಆಧಾರ್ ಜೋಡಣೆ ಮಾಡಿಕೊಂಡರೆ ಯೋಜನೆ ಹಣ ಜಮಾ ಆಗಲಿದೆ.