ಬೆಂಗಳೂರು: ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಂದಣಿ ಕೇಂದ್ರಗಳಿಗೆ ತಮ್ಮ ದಾಖಲೆಗಳೊಂದಿಗೆ ತೆರಳಿ ಹೆಸರು ನೋಂದಾಯಿಸಿಕೊಳ್ಳಬಹುದು.
ಇದಕ್ಕೂ ಮೊದಲು ಅರ್ಹ ಫಲಾನುಭವಿಗಳ ಮೊಬೈಲ್ ಸಂಖ್ಯೆಗೆ ಮೆಸೇಜ್ (ಶೆಡ್ಯೂಲಿಂಗ್) ಬಂದರಷ್ಟೇ ನೋಂದಣಿ ಕೇಂದ್ರಗಳಿಗೆ ತೆರಳಬೇಕಿತ್ತು. ಇದೀಗ ಎಸ್ಎಂಎಸ್ ಅವಲಂಭಿಸದೇ ನೇರವಾಗಿ ನೋಂದಣಿ ಕೇಂದ್ರಗಳಿಗೆ ದಾಖಲಾತಿಗಳೊಂದಿಗೆ ತೆರಳಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
ಮನೆ ಯಜಮಾನಿ ಮೃತಪಟ್ಟಿದ್ರೆ ‘ಗೃಹಲಕ್ಷ್ಮಿ’ ಯ 2 ಸಾವಿರ ಯಾರಿಗೆ ಸಿಗುತ್ತೆ..? ಅಂತಹ ಸಂದರ್ಭಗಳಲ್ಲಿ ಏನು ಮಾಡಬೇಕು. ಇಲ್ಲಿದೆ ಮಾಹಿತಿ. ಅರ್ಜಿ ಸಲ್ಲಿಸುವ ಮೊದಲು ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಕೊಳ್ಳಬೇಕು, ಮನೆ ಯಜಮಾನಿ ಮೃತಪಟ್ಟರೆ ..ನಂತರದ ಮನೆ ಯಜಮಾನಿ ಯಾರು..? ಅವರ ಹೆಸರನ್ನು ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಕೊಂಡು ನಂತರ ಅರ್ಜಿ ಸಲ್ಲಿಸಬೇಕು. ಕುಟುಂಬದ ಮುಖ್ಯಸ್ಥರ ಸ್ಥಾನದಲ್ಲಿ ಯಾವ ಮಹಿಳೆಯ ಹೆಸರಿನಲ್ಲಿ ಅರ್ಜಿ ಸಲ್ಲಿಸಬೇಕು ಎಂಬುದನ್ನು ಬದಲಾವಣೆ ಮಾಡಿಕೊಂಡರೆ ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಸಲು ಅವಕಾಶ ಸಿಗುತ್ತೆ, ಯೋಜನೆಗೆ ಕಡೆ ದಿನಾಂಕ ತಿಳಿಸದೇ ಇರುವುದರಿಂದ ಎಲ್ಲಾ ದಾಖಲೆ ಸರಿಪಡಿಸಿಕೊಂಡು ತಿದ್ದುಪಡಿ ಮಾಡಿಕೊಂಡು ಅರ್ಜಿ ಸಲ್ಲಿಸುವುದು ಒಳ್ಳೆಯದು.