alex Certify Gruha Lakshmi Scheme : ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ಗೆ ಅರ್ಜಿ ಸಲ್ಲಿಸುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Gruha Lakshmi Scheme : ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ಗೆ ಅರ್ಜಿ ಸಲ್ಲಿಸುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ

ಬೆಂಗಳೂರು : ಮನೆಯ ಯಜಮಾನಿಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಒಂದು ದಿನಕ್ಕೆ ಒಂದು ಸೇವಾ ಕೇಂದ್ರದಲ್ಲಿ 60 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ.

ಗೃಹಲಕ್ಷ್ಮೀ ಯೋಜನೆ ಕರ್ನಾಟಕ ಸರ್ಕಾರದ ಪ್ರಮುಖ ಮಹಿಳಾ ಸಬಲೀಕರಣ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಯಜಮಾನಿಗೆ 2,000 ರೂ. ಜಮೆ ಮಾಡಲಾಗುತ್ತದೆ.ಗೃಹಲಕ್ಷ್ಮೀ ಯೋಜನೆಯು ಜುಲೈ 19 ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಧೀಕೃತವಾಗಿ ಚಾಲನೆಗೊಂಡಿದೆ. ಪ್ರತಿ ಫಲಾನುಭವಿಯ ನೋಂದಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902ಗೆ ಕಾಲ್ ಮಾಡಿ ಅಥವಾ 8147500500 ನಂಬರಗೆ ಎಸ್ಎಂಎಸ್ ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದು.

ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳು ಮತ್ತು ನಗರ ಪ್ರದೇಶದಲ್ಲಿ ಕರ್ನಾಟಕ ಒನ್ ಕೇಂದ್ರಗಳು ಅರ್ಜಿ ಸಲ್ಲಿಸುವ ಕೇಂದ್ರಗಳಾಗಿರುತ್ತವೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕವನ್ನು ಪಾವತಿಸತಕ್ಕದ್ದಲ್ಲ. ಯೋಜನೆ ನೋಂದಣಿ ಸಂಪೂರ್ಣ ಉಚಿತವಾಗಿರುತ್ತದೆ. ಅರ್ಜಿದಾರರು ಮಧ್ಯವರ್ತಿಗಳ ಮೇಲೆ ಅಂವಲಂಬಿತರಾಗದೇ ಅರ್ಜಿಯನ್ನು ಸ್ವತಃ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ. ಕುಟುಂಬದ ಯಜಮಾನಿಗೆ ನೋಂದಣಿ ದಿನಾಂಕ, ಸಮಯ ಮತ್ತು ಸ್ಥಳದ ವಿವರವನ್ನು ಎಸ್ಎಂಎಸ್ ಮೂಲಕ ತಿಳಿಸಲಾಗುವುದು. ಈ ಯೋಜನೆಯ ನೋಂದಣಿಗೆ ಯಾವುದೇ ಅಂತಿಮ ದಿನಾಂಕ ಮತ್ತು ಸಮಯವನ್ನು ಸರ್ಕಾರ ನಿಗದಿಪಡಿಸಿರುವುದಿಲ್ಲ ಎಂದು ತಿಳಿದು ಬಂದಿದೆ.

‘ಗೃಹಲಕ್ಷ್ಮಿ ಯೋಜನ” ಕರ್ನಾಟಕ ಸರ್ಕಾರದ ಪ್ರಮುಖ ಮಹಿಳಾ ಸಬಲೀಕರಣ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಯಜಮಾನಿಗೆ ಮಾಸಿಕ ರೂ. 2000/- ಹಣ ವಿತರಣೆ ಮಾಡಲಾಗುತ್ತದೆ.

ಮೊದಲಿಗೆ ಹೆಡ್ ಆಫ್ ದ ಫ್ಯಾಮಿಲಿ ಆಧಾರ್ ಕಾರ್ಡ್ ಅಲ್ಲಿ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯಿಂದ 8147500500 ಈ ಮೊಬೈಲ್ ಸಂಖ್ಯೆಗೆ ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು SMS ಮೂಲಕ ಕಳುಹಿಸಬೇಕು.SMS ಕಳುಹಿಸಿದ ಕೆಲವೇ ಕ್ಷಣಗಳಲ್ಲಿ ನಿಮಗೆ VM-SEVSIN ಕರ್ನಾಟಕ ಸರ್ಕಾರದ ವತಿಯಿಂದ ನೀವು ಯಾವ ದಿನಾಂಕದಲ್ಲಿ ಯಾವ ಸಮಯಕ್ಕೆ ಯಾವ ಸ್ಥಳದಲ್ಲಿ ಹೋಗಿ ಅರ್ಜಿ ಸಲ್ಲಿಸಬೇಕು ಎಂಬ ಮೆಸೇಜ್ ಬರುತ್ತದೆ. ಒಂದು ವೇಳೆ ಮೆಸೇಜ್ ಬಾರದಿದ್ದರೆ ಅದು ಸರ್ವರ್ ಸಮಸ್ಯೆ ಆಗಿರುತ್ತದೆ, ಆದ್ದರಿಂದ ಮತ್ತೆ ನೀವು ಸಂದೇಶ ಕಳುಹಿಸಬೇಕು. ನಿಮಗೆ SMS ಮೂಲಕ ಯಾವ ಗ್ರಾಮದಲ್ಲಿ ಯಾವ ಕೇಂದ್ರದಲ್ಲಿ ಯಾವ ಸಮಯಕ್ಕೆ ಹೋಗಿ ಅರ್ಜಿ ಸಲ್ಲಿಸಬೇಕು ಎನ್ನುವ ಮಾಹಿತಿ ಬರುತ್ತದೆ.

ಗ್ರಾಮಾಂತರ ಪ್ರದೇಶದಲ್ಲಿ ವಾಸಿಸುವ ಫಲಾನುಭವಿಗಳು ಗ್ರಾಮದ ಸಮೀಪವಿರುವ ಗ್ರಾಮ ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರಗಳಿಗೆ ಮತ್ತು ನಗರ ಪ್ರದೇಶದಲ್ಲಿ ವಾಸಿಸುವ ಫಲಾನುಭವಿಗಳು ಸಮೀಪದ ಕರ್ನಾಟಕ ಒನ್, ವಾರ್ಡ ಕಛೇರಿ, ಸ್ಥಳಿಯ ನಗರಾಡಳಿತ ಸಂಸ್ಥೆಯ ಕಛೇರಿ, ಗೃಹಲಕ್ಷ್ಮೀ ನೋಂದಣಿ ಕೇಂದ್ರಕ್ಕೆ ಹೋಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Odhalte 3 rozdiely medzi dvoma kresbami za 16 sekúnd: slovenská „Hádanka pre "vyvolených": len géniovia dokážu nájsť leoparda za Optická ilúzia s obratom: len génius dokáže nájsť hrocha Tajomstvo géniusa: rýchla hádanka, ktorá zatieni svoju zložitosť za