ಬೆಂಗಳೂರು : ಜುಲೈ 14 ರಿಂದ ‘ಗೃಹಲಕ್ಷ್ಮಿ’ಯೋಜನೆಗೆ ಅರ್ಜಿ ಸಲ್ಲಿಕೆ ಶುರುವಾಗುವಸಾಧ್ಯತೆಯಿದೆ ಎಂದು ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ .
ಸಂಪುಟ ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಹೆಚ್ ಕೆ ಪಾಟೀಲ್ ಗೃಹಲಕ್ಷ್ಮಿ’ ಯೋಜನೆ ಜಾರಿ ಸಂಬಂಧ ಇಂದು ಸಂಪುಟ ಸಭೆಯಲ್ಲಿಚರ್ಚೆ ನಡೆದಿದೆ. ಜುಲೈ 14 ರಂದು ‘ಗೃಹಲಕ್ಷ್ಮಿ’ ಯೋಜನೆ ಜಾರಿ ಸಾಧ್ಯತೆ ಇದೆ ಎಂದು ಹೇಳಿದರು.
‘ಗೃಹಲಕ್ಷ್ಮಿ’ ಯೋಜನೆ ಹೆಸರಿನಲ್ಲಿ ಬಂದಿದೆ ಮೂರು ನಕಲಿ ಆ್ಯಪ್
ಮನೆ ಒಡತಿಯರಿಗೆ 2 ಸಾವಿರ ನೀಡುವ ರಾಜ್ಯ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಯ ಪ್ರತ್ಯೇಕ ಆಪ್ಗೆ ಕ್ಯಾಬಿನೆಟ್ ನಲ್ಲಿ ಗ್ರೀನ್ ಸಿಗ್ನಲ್ ಸಿಕ್ಕಿದೆ. ರಾಜ್ಯ ಸರ್ಕಾರದ ಅಧಿಕೃತ ‘ಗೃಹಲಕ್ಷ್ಮೀ ಆ್ಯಪ್’ ಬಿಡುಗಡೆಗೂ ಮುನ್ನ ನಕಲಿ ಆ್ಯಪ್ ಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಹೌದು, ಪ್ಲೇಸ್ಟೋರ್ನಲ್ಲಿ ಗೃಹಲಕ್ಷ್ಮೀ ಹೆಸರಿನಲ್ಲಿ ಮೂರು ನಕಲಿ ಆ್ಯಪ್ಗಳನ್ನು ಕಿಡಿಗೇಡಿಗಳು ಸೃಷ್ಟಿಸಿ ಜನರನ್ನು ಯಾಮಾರಿಸುವ ಕೆಲಸ ಮಾಡುತ್ತಿದೆ ಗೃಹಲಕ್ಷ್ಮಿ ಸ್ಕೀಮ್ ಎನ್ನುವ ಹೆಸರಿನಲ್ಲಿ ಒಂದು ಆ್ಯಪ್ , ಗೃಹ ಲಕ್ಷ್ಮಿ ಯೋಜನಾ ಆ್ಯಪ್ , ಗೃಹಲಕ್ಷ್ಮೀ ಯೋಜನೆ ಅಪ್ಲಿಕೇಶನ್ ಎನ್ನುವ ಹೆಸರಿಲ್ಲಿ ಒಟ್ಟು ಮೂರು ನಕಲಿ ಆ್ಯಪ್ ಪ್ಲೇ ಸ್ಟೋರಿನಲ್ಲಿ ಪತ್ತೆಯಾಗಿವೆ. ಇವು ನಕಲಿ ಆ್ಯಪ್ ಗಳಾಗಿದೆ. ನೀವೇನಾದರೂ ಈ ನಕಲಿ ಆ್ಯಪ್ ಬಳಸಿದ್ರೆ ನಿಮ್ಮ ಬ್ಯಾಂಕ್ ಖಾತೆಗಳಿಗೂ ಕನ್ನ ಹಾಕುವ ಸಾಧ್ಯತೆಯಿದೆ. ಆದ್ದರಿಂದ ನೀವು ಎಚ್ಚರದಿಂದಿರುವುದು ಒಳಿತು.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಆಪ್ ಬಗ್ಗೆ ಚರ್ಚೆ ನಡೆದಿದ್ದು, ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕುರಿತು ಸರ್ಕಾರದ ನಿರ್ಧಾರ ತೆಗೆದುಕೊಂಡಿದೆ.ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಎಂ ಸಿದ್ದರಾಮಯ್ಯಗೆ ಆಪ್ ಬಗ್ಗೆ ವಿವರಣೆ ನೀಡಿದರು. ಸದ್ಯದಲ್ಲೇ ಅರ್ಜಿ ಸಲ್ಲಿಕೆಗೆ ದಿನಾಂಕ ನಿಗದಿಯಾಗಲಿದೆ.
ಗೃಹಲಕ್ಷ್ಮೀ ಯೋಜನೆಯಡಿ 2,000 ರೂ. ಪಡೆಯಲು ಎಪಿಎಲ್, ಬಿಪಿಎಲ್, ಅಂತ್ಯೋದಯ ಕಾರ್ಡ್ ಸೇರಿ ಯಾವುದಾದರೂ ಒಂದು ಇರಲೇಬೇಕು. ಲಾಭ ಪಡೆಯಲು ಮನೆಯೊಡತಿಯ ಬ್ಯಾಂಕ್ ಹಾಗೂ ಆಧಾರ್ ಕಾರ್ಡ್ ಅನ್ನು ಜೋಡಣೆ ಮಾಡಿರಲೇಬೇಕು. ಯೋಜನೆಯ ಲಾಭ ಪಡೆಯಲು ತಪ್ಪು ಮಾಹಿತಿ ನೀಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ.
ಚುನಾವಣೆಯಲ್ಲಿ ಗೆದ್ದ ಬಳಿಕ ಒಂದೊಂದೇ ಯೋಜನೆಗಳ ಜಾರಿಗೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಕೊಡುವ ‘ಶಕ್ತಿ’ ಯೋಜನೆ ಈಗಾಗಲೇ ಅನುಷ್ಠಾನಗೊಂಡಿದ್ದು, ಪ್ರತಿನಿತ್ಯ ಲಕ್ಷಾಂತರ ಮಂದಿ ಇದರ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.