ಬೆಂಗಳೂರು : ಮಹಿಳೆಯರಿಗೆ 2,000 ರೂ. ಆರ್ಥಿಕ ನೆರವು ನೀಡುವ ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರಂದು ನಾಳೆ ಮೈಸೂರಿನಲ್ಲಿ ಅಧಿಕೃತ ಚಾಲನೆ ಸಿಗಲಿದೆ.
ಮುಖ್ಯವಾದ ವಿಚಾರ ಅಂದ್ರೆ ಗೃಹಲಕ್ಷ್ಮಿಗೆ’ ಅರ್ಜಿ ಸಲ್ಲಿಸದ ಮಾತ್ರಕ್ಕೆ ಹಣ ಜಮೆ ಆಗಲ್ಲ, ತಪ್ಪದೇ ನೀವು ಈ ಕೆಲಸ ಮಾಡಬೇಕು .ಅರ್ಜಿ ಸಲ್ಲಿಕೆ ಪೂರ್ತಿಯಾದ ಮೇಲೂ ಈ ಕೆಲಸ ಮಾಡದಿದ್ದರೆ ಅವರು ಯೋಜನೆಯಿಂದ ವಂಚಿತರಾಗಬಹುದು.
1) ಯಜಮಾನಿಯರು ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡದೇ ಇದ್ದರೆ ಹಣ ಜಮಾ ಆಗಲ್ಲ. ಹೌದು,ತಪ್ಪದೇ ನೀವು ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕು.
2) ಹಣವನ್ನು ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಲಾಗಿದ್ದು. ಆದ್ದರಿಂದ ತಪ್ಪದೇ ನೀವು ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕು.
3) ಅರ್ಜಿ ಸಲ್ಲಿಸಿದ್ದರು ಕೂಡ ನಿಮ್ಮ ಬ್ಯಾಂಕ್ ಶಾಖೆಗೆ ಹೋಗಿ ಆಧಾರ್ ಸೀಡಿಂಗ್ ಗಾಗಿ ಅರ್ಜಿ ಸಲ್ಲಿಸಿ, ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು NPCI ಮ್ಯಾಪಿಂಗ್ ಮಾಡಿಸಬೇಕು.
ಕಾಂಗ್ರೆಸ್ ಸರ್ಕಾರಕ್ಕೆ 100 ದಿನ ತುಂಬಿದ ಸಂದರ್ಭದಲ್ಲಿಯೇ ಸಿಎಂ ಮೈಸೂರು ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೊಳ್ಳಲಿದೆ. ನಾಳೆ ಸಿಎಂ ಸಿದ್ದರಾಮಯ್ಯ ಎಲ್ಲಾ ಮಹಿಳಾ ಫಲಾನುಭವಿಗಳ ಖಾತೆಗೆ 2000 ಹಣ ವರ್ಗಾವಣೆ ಮಾಡಲಿದ್ದಾರೆ. ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಲಿಸ್ಟ್ ನ್ನು ಸರ್ಕಾರ ಬಿಡುಗಡೆ ಮಾಡಿದ್ದು, ನಿಮ್ಮ ಹೆಸರು ಪಟ್ಟಿಯಲ್ಲಿ ಇದೆಯಾ..? ಇಲ್ಲವಾ ಎಂದು ಚೆಕ್ ಮಾಡಿಕೊಳ್ಳಬಹುದು.
ಈ ಯೋಜನೆ ಆಶಾ – ಅಂಗನವಾಡಿ ಕಾರ್ಯಕರ್ತೆಯರಿಗೆ ಅನ್ವಯವಾಗುತ್ತದೋ ಇಲ್ಲವೋ ಎಂಬ ಗೊಂದಲವಿದ್ದು, ಇದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರೆ ಎಳೆದಿದ್ದಾರೆ. ಸೋಮವಾರದಂದು ಚಾಮರಾಜನಗರದಲ್ಲಿ ಗೃಹಲಕ್ಷ್ಮಿ ಯೋಜನೆ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಅಂಗನವಾಡಿ – ಆಶಾ ಕಾರ್ಯಕರ್ತೆಯರಿಗೂ ಗೃಹಲಕ್ಷ್ಮಿ ಯೋಜನೆ ಅನ್ವಯವಾಗುತ್ತದೆ. ಅಲ್ಲದೆ ಯೋಜನೆಗೆ ನೋಂದಣಿ ಮಾಡಲು ಯಾವುದೇ ಗಡುವು ನಿಗದಿಪಡಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.