alex Certify Gruha Lakshmi Scheme : `ಗೃಹಲಕ್ಷ್ಮಿ’ ಹಣ ಸಿಗದವರು `ಈ’ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ : ಮನೆ ಬಾಗಿಲಿಗೆ ಬರಲಿದೆ ಹಣ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Gruha Lakshmi Scheme : `ಗೃಹಲಕ್ಷ್ಮಿ’ ಹಣ ಸಿಗದವರು `ಈ’ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ : ಮನೆ ಬಾಗಿಲಿಗೆ ಬರಲಿದೆ ಹಣ!

ಬೆಂಗಳೂರು : ಖಾತೆಗೆ ಹಣ ಬಾರದೇ ಇರುವ ಯಜಮಾನಿಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಹಣವನ್ನು ಅರ್ಹ ಪಲಾನುಭವಿಗಳಿಗೆ ತಲುಪಿಸಲು ಮಹತ್ವದ ಕ್ರಮ ಕೈಗೊಂಡಿದೆ.

ಹೌದು,  ಅಂಗನವಾಡಿ ಕಾರ್ಯಕರ್ತೆಯರು ಮನೆಗಳಿಗೆ ಹೋಗಿ ತಿಳಿವಳಿಕೆ ನೀಡಿ ಗೃಹಲಕ್ಷ್ಮಿ ಯೋಜನೆಗೆ ಯಜಮಾನಿಯರನ್ನು ಸೇರ್ಪಡೆ ಮಾಡುತ್ತಿದ್ದಾರೆ. ಬ್ಯಾಂಕ್ ಖಾತೆ ಸಮಸ್ಯೆ ಇದ್ದರೆ ಅಂಚೆ ಕಚೇರಿಯಲ್ಲಿ ಖಾತೆ ತೆರೆದು ಗೃಹಿಣಿಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಪಾವತಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಗೃಹಲಕ್ಷ್ಮಿ ಯೋಜನೆಗೆ ಬೇಕಾಗುವ ದಾಖಲೆಗಳು

ಈ ಯೋಜನೆಗೆ  ಕಡ್ಡಾಯವಾಗಿ ಬಿಪಿಎಲ್ ಕಾರ್ಡ್ ಅಥವಾ ಅಂತ್ಯೋದಯ ಕಾರ್ಡ್ ಅಥವಾ ಎಪಿಎಲ್ ಕಾರ್ಡ್ ಹೊಂದಿರತಕ್ಕದ್ದು.

ಕುಟುಂಬದ  ಮಹಿಳೆಯ ಗಂಡನ ಅಥವಾ ಪೋಷಕರ ಆಧಾರ್ ಕಾರ್ಡ್ ಇರಬೇಕು ಮತ್ತು ಮಹಿಳೆಯ ಬ್ಯಾಂಕ್ ಪಾಸ್ ಬುಕ್ ಇರಬೇಕು.

ಗೃಹಲಕ್ಷ್ಮಿ  ಯೋಜನೆಯಡಿ ಪ್ರತಿ ತಿಂಗಳು ಯಜಮಾನಿಯರ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ. ಒಂದೆರಡು ದಿನ ವಿಳಂಬ ಆಗಬಹುದು. 1.8 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು 2.500 ಕೋಟಿ ರೂ. ಸಂದಾಯ ಮಾಡಲಾಗುತ್ತಿದೆ . 6-7 ಲಕ್ಷ ಮಹಿಳೆಯರು ಉಳಿದುಕೊಂಡಿದ್ದು, ಅವರಲ್ಲಿ ಎರಡು ಲಕ್ಷ ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ.

ರಾಜ್ಯದಲ್ಲಿ  ಸುಮಾರು 33 ಐಪಿಪಿಬಿ (India Post payment) ಶಾಖೆಗಳಿದ್ದು, ಹಾಗಾಗಿ ಇಲ್ಲಿ ಖಾತೆ ತೆರೆದರೆ ಗೃಹಲಕ್ಷ್ಮಿ ಯೋಜನೆಯ ಹಣ ಬಹಳ ಬೇಗ ಮಹಿಳೆಯರ ಖಾತೆ ತಲುಪುತ್ತದೆ. ಪೋಸ್ಟ್ ಆಫೀಸ್ ಖಾತೆ ತೆರೆದ ಕೆಲವೇ ಗಂಟೆಗಳಲ್ಲಿ ಹಲವು ಮಹಿಳೆಯರಿಗೆ ಜಮಾ ಆಗಿದೆಯಂತೆ. ಹಾಗಾಗಿ ಮಹಿಳೆಯರಿಗೆ ಪೋಸ್ಟ್ ಆಫೀಸ್ ನಲ್ಲಿ ಅಕೌಂಟ್ ಮಾಡಿಸಲು ಸೂಚನೆ ನೀಡಲಾಗಿದೆ.

ಮುಂದಿನ  15 ದಿನದೊಳಗೆ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ಪಾವತಿಸಲಾಗುವುದು. 1902 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಹಿಳೆಯರು ಮಾಹಿತಿ ಪಡೆದುಕೊಳ್ಳಬಹುದು. ತಾಂತ್ರಿಕ ಕಾರಣದಿಂದ ಮಹಿಳೆಯರ ಖಾತೆಗೆ ಹಣ ಜಮಾ ಆಗಿಲ್ಲ. ಈ ಬಗ್ಗೆ ಮಾಹಿತಿ ಪಡೆದಿದ್ದು, ಇನ್ನೂ 15 ದಿನದೊಳಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...