alex Certify Gruha Lakshmi Scheme : ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ ನೋಂದಣಿಗೆ ‘SMS’ ಕಳುಹಿಸಿದ್ರು ರಿಪ್ಲೈ ಬರುತ್ತಿಲ್ಲವಾ.? ಹೀಗೆ ಮಾಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Gruha Lakshmi Scheme : ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ ನೋಂದಣಿಗೆ ‘SMS’ ಕಳುಹಿಸಿದ್ರು ರಿಪ್ಲೈ ಬರುತ್ತಿಲ್ಲವಾ.? ಹೀಗೆ ಮಾಡಿ

ಬೆಂಗಳೂರು : ಮನೆಯ ಯಜಮಾನಿಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಸರ್ವರ್ ಸಮಸ್ಯೆಯಿಂದ ಅರ್ಜಿ ಸಲ್ಲಿಕ ತಡವಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಇನ್ನೂ ಸಹ ಬಹಳ ಸಮಯವಕಾಶವಿದ್ದು ಒಂದು ದಿನಕ್ಕೆ ಒಂದು ಸೇವಾ ಕೇಂದ್ರದಲ್ಲಿ 60 ಜನರಿಗೆ ಮಾತ್ರ ಅವಕಾಶ ಇರುವುದರಿಂದ ಪ್ರಕ್ರಿಯೆ ಈಗ ನಿಧಾನವಾಗಿ ಆರಂಭಗೊಳ್ಳುತ್ತಿದೆ.

ಪಡಿತರ ಚೀಟಿಯಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಯ ಮೋಬೈಲ್ ಸಂಖ್ಯೆಗೆ ನೋಂದಣಿ ದಿನಾಂಕ, ಸಮಯ ಹಾಗೂ ನೊಂದಣಿ ಕೇಂದ್ರದ ವಿವರಗಳನ್ನು ಎಸ್.ಎಂ.ಎಸ್. ಮೂಲಕ ತಿಳಿಸಲಾಗುತ್ತದೆ.ಮೊದಲಿಗೆ ಹೆಡ್ ಆಫ್ ದ ಫ್ಯಾಮಿಲಿ ಆಧಾರ್ ಕಾರ್ಡ್ ಅಲ್ಲಿ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯಿಂದ 8147500500 ಈ ಮೊಬೈಲ್ ಸಂಖ್ಯೆಗೆ ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು SMS ಮೂಲಕ ಕಳುಹಿಸಬೇಕು.

SMS ಕಳುಹಿಸಿದ ಕೆಲವೇ ಕ್ಷಣಗಳಲ್ಲಿ ನಿಮಗೆ VM-SEVSIN ಕರ್ನಾಟಕ ಸರ್ಕಾರದ ವತಿಯಿಂದ ನೀವು ಯಾವ ದಿನಾಂಕದಲ್ಲಿ ಯಾವ ಸಮಯಕ್ಕೆ ಯಾವ ಸ್ಥಳದಲ್ಲಿ ಹೋಗಿ ಅರ್ಜಿ ಸಲ್ಲಿಸಬೇಕು ಎಂಬ ಮೆಸೇಜ್ ಬರುತ್ತದೆ. ಒಂದು ವೇಳೆ ಮೆಸೇಜ್ ಬಾರದಿದ್ದರೆ ಅದು ಸರ್ವರ್ ಸಮಸ್ಯೆ ಆಗಿರುತ್ತದೆ, ಆದ್ದರಿಂದ ಮತ್ತೆ ನೀವು ಸಂದೇಶ ಕಳುಹಿಸಬೇಕು. ನಿಮಗೆ SMS ಮೂಲಕ ಯಾವ ಗ್ರಾಮದಲ್ಲಿ ಯಾವ ಕೇಂದ್ರದಲ್ಲಿ ಯಾವ ಸಮಯಕ್ಕೆ ಹೋಗಿ ಅರ್ಜಿ ಸಲ್ಲಿಸಬೇಕು ಎನ್ನುವ ಮಾಹಿತಿ ಬರುತ್ತದೆ.

ಮೆಸೇಜ್ ಕಳುಹಿಸಿದ್ರು ರಿಪ್ಲೈ ಬರುತ್ತಿಲ್ಲವಾ.? ಇಲ್ಲಿದೆ ಪರಿಹಾರ

ನಿಮ್ಮ ಮೆಸೇಜ್ ಗೆ ರಿಪ್ಲೈ ಬಂದಿಲ್ಲ ಎಂದರೆ ತಾಂತ್ರಿಕ ಸಮಸ್ಯೆಯಿಂದ ಹೀಗಾಗಿರಬಹುದು. ಗೃಹಲಕ್ಷ್ಮಿ ಯೋಜನೆಯ ಅಧಿಕೃತ ವೆಬ್ಸೈಟ್ https://sevasindhugs.karnataka.gov.in/ ಗೆ ಭೇಟಿ ನೀಡಿ ನಿಮ್ಮ ಪಡಿತರ ಚೀಟಿ ಸಂಖ್ಯೆ ಹಾಗೂ ಕ್ಯಾಪ್ಚಾ ನಮೂದಿಸಿ ನೀವು ಅರ್ಜಿ ಸಲ್ಲಿಸುವ ವೇಳಾಪಟ್ಟಿ ಚೆಕ್ ಮಾಡಿಕೊಳ್ಳಬಹುದು.
ಸರ್ಕಾರ ಈ ಮೊದಲು 8147500500 ಸಹಾಯವಾಣಿ ಸಂಖ್ಯೆಗೆ SMS ಕಳುಹಿಸಿ ಸ್ಲಾಟ್ ಬುಕಿಂಗ್ ಸೂಚಿಸಿತ್ತು, ಈಗ ಮತ್ತೊಂದು ಸಹಾಯವಾಣಿ ಸಂಖ್ಯೆಯನ್ನು ಕೂಡ ನೀಡಿದೆ. 8277000555 ಸಹಾಯವಾಣಿ ಸಂಖ್ಯೆಗೂ ಕೂಡ ಪಡಿತರ ಚೀಟಿ ಸಂಖ್ಯೆಯನ್ನು SMS ಮಾಡಿ ನೋಂದಣಿ ವೇಳಾಪಟ್ಟಿ ಪಡೆದುಕೊಳ್ಳಬಹುದು.

ಗ್ರಾಮಾಂತರ ಪ್ರದೇಶದಲ್ಲಿ ವಾಸಿಸುವ ಫಲಾನುಭವಿಗಳು ಗ್ರಾಮದ ಸಮೀಪವಿರುವ ಗ್ರಾಮ ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರಗಳಿಗೆ ಮತ್ತು ನಗರ ಪ್ರದೇಶದಲ್ಲಿ ವಾಸಿಸುವ ಫಲಾನುಭವಿಗಳು ಸಮೀಪದ ಕರ್ನಾಟಕ ಒನ್, ವಾರ್ಡ ಕಛೇರಿ, ಸ್ಥಳಿಯ ನಗರಾಡಳಿತ ಸಂಸ್ಥೆಯ ಕಛೇರಿ, ಗೃಹಲಕ್ಷ್ಮೀ ನೋಂದಣಿ ಕೇಂದ್ರಕ್ಕೆ ಹೋಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...