ಬೆಂಗಳೂರು: ಗೃಹಜ್ಯೋತಿ ಉಚಿತ ವಿದ್ಯುತ್ ನೋಂದಣಿಗೆ ಅಂತಿಮ ಗಡುವು ಇಲ್ಲ. ಗೃಹಜ್ಯೋತಿ ಯೋಜನೆಯ ಸೌಲಭ್ಯ ಪಡೆಯಲು ಅರ್ಜಿ ನೋಂದಣಿಗೆ ಯಾವುದೇ ಅಂತಿಮ ಗಡುವು ನೀಡಿಲ್ಲ.
ಜುಲೈ ತಿಂಗಳ ವಿದ್ಯುತ್ ಬಳಕೆಗೆ ಶುಲ್ಕ ಪಾವತಿಸದಿರಲು ಜುಲೈ 27ರ ಒಳಗೆ ಅರ್ಜಿ ಸಲ್ಲಿಸಬೇಕಿದೆ ಎಂದು ಇಂಧನ ಇಲಾಖೆ ತಿಳಿಸಿದೆ. ಗೃಹ ಬಳಕೆ ವಿದ್ಯುತ್ ಗ್ರಾಹಕರಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ನೋಂದಣಿ ಪ್ರಕ್ರಿಯೆ ನಡೆದಿದ್ದು, 1.10 ಗ್ರಾಹಕರು ನೋಂದಣಿ ಮಾಡಿಸಿಕೊಂಡಿದ್ದಾರೆ.
ನೋಂದಣಿ ಮಾಡಿಸಿಕೊಂಡವರಿಗೆ ಅವರ ಹಿಂದಿನ 12 ತಿಂಗಳ ಸರಾಸರಿ ಆಚರಿಸಿ ಶೇಕಡ 10ರಷ್ಟು ಹೆಚ್ಚುವರಿ ವಿದ್ಯುತ್ ಉಚಿತವಾಗಿ ಬಳಸಲು ಅವಕಾಶ ನೀಡಲಾಗುವುದು. ಅರ್ಜಿ ಸಲ್ಲಿಸಿದವರಿಗೆ ಜುಲೈ ತಿಂಗಳ ವಿದ್ಯುತ್ ಬಳಕೆಗೆ ಆಗಸ್ಟ್ ನಲ್ಲಿ ಶೂನ್ಯ ಬಿಲ್ ನೀಡಲಾಗುತ್ತದೆ. ಒಂದು ವೇಳೆ ಜುಲೈ 27ರ ಒಳಗೆ ಅರ್ಜಿ ಸಲ್ಲಿಸದಿದ್ದರೆ ಜುಲೈ ಬಳಕೆಯ ವಿದ್ಯುತ್ ನ ಪೂರ್ಣ ಶುಲ್ಕವನ್ನು ಪಾವತಿಸಬೇಕಿದೆ ಎಂದು ಹೇಳಲಾಗಿದೆ.