ಬೆಂಗಳೂರು: ಸೇವಾ ಸಿಂಧು ಪೋರ್ಟಲ್ ನಲ್ಲಿ ಗೃಹಜ್ಯೋತಿ ಯೋಜನೆಯಡಿ ಮೂರನೇ ದಿನವಾದ ಮಂಗಳವಾರ 3,85,481 ಅರ್ಜಿ ಸಲ್ಲಿಕೆಯಾಗಿವೆ.
ಸರ್ವರ್ ಸಮಸ್ಯೆಯ ನಡುವೆಯೂ ಇದುವರೆಗೆ 8,16,631 ಅರ್ಜಿ ಸಲ್ಲಿಸಲಾಗಿದೆ. ಮೊದಲು ದಿನವಾದ ಜೂನ್ 18ರಂದು 96,305 ಮಂದಿ ಗೃಹಜ್ಯೋತಿ ಯೋಜನೆಗೆ ನೋಂದಣಿ ಮಾಡಿಸಿಕೊಂಡಿದ್ದಾರೆ. ಎರಡನೇ ದಿನ 3,34,845 ಅರ್ಜಿ ಸಲ್ಲಿಕೆಯಾಗಿವೆ.
ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ಆಯ್ದ ಎಸ್ಕಾಂ ಕಚೇರಿಗಳಲ್ಲಿ, ಲ್ಯಾಪ್ಟಾಪ್, ಮೊಬೈಲ್, ಕಂಪ್ಯೂಟರ್ ನಲ್ಲಿಯೂ ಸಾರ್ವಜನಿಕರು ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ನೋಂದಣಿ ಪ್ರಕ್ರಿಯೆ ಸರಳವಾಗಿದ್ದು, ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ನಲ್ಲಿ ಆಧಾರ್, ಮೊಬೈಲ್ ಸಂಖ್ಯೆ ಹಾಗೂ ಖಾತೆ ಸಂಖ್ಯೆ ನಮೂದಿಸಿ ನೋಂದಣಿ ಮಾಡಿಸಿಕೊಳ್ಳಬಹುದು. ನೋಂದಣಿಗೆ ಕೊನೆ ದಿನ ಇರುವುದಿಲ್ಲ ಎನ್ನಲಾಗಿದೆ.