ಬೆಂಗಳೂರು: ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆ ಉಚಿತ ವಿದ್ಯುತ್ ಬಿಲ್ ನೀಡಿಕೆ ಆ. 1 ರಿಂದ ಆರಂಭವಾಗಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಲಬುರಗಿಯ ನೂತನ ವಿದ್ಯಾಲಯ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಧಿಕೃತ ಚಾಲನೆ ನೀಡಲಿದ್ದಾರೆ.
ಮೊದಲ ತಿಂಗಳಲ್ಲಿ 1.42 ಕೋಟಿ ಕುಟುಂಬಗಳು ಯೋಜನೆಯ ಪ್ರಯೋಜನ ಪಡೆಯಲಿವೆ. ಜುಲೈ 27ಕ್ಕೆ ಮೊದಲು ಅರ್ಜಿ ಸಲ್ಲಿಸಿದವರಿಗೆ ಜುಲೈ ತಿಂಗಳ ವಿದ್ಯುತ್ ಬಳಕೆಯ ಶುಲ್ಕದಲ್ಲಿ ವಿನಾಯಿತಿ ಸಿಗಲಿದೆ. ಜುಲೈ 27ರ ನಂತರ ಅರ್ಜಿ ಸಲ್ಲಿಸಿದವರಿಗೆ ಆಗಸ್ಟ್ ನಲ್ಲಿ ಪ್ರಯೋಜನ ಸಿಗಲಿದೆ.
ಆಗಸ್ಟ್ 1ರಿಂದ ಶೂನ್ಯ ಬಿಲ್ ವಿತರಣೆ ಮಾಡಲಾಗುತ್ತಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಅಧಿಕೃತ ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಮೊದಲಾದವರು ಭಾಗವಹಿಸಲಿದ್ದಾರೆ. ಸಾಂಕೇತಿಕವಾಗಿ 10 ಜನರಿಗೆ ಶೂನ್ಯ ಬಿಲ್ ವಿತರಿಸಲಾಗುವುದು.