ಬೆಂಗಳೂರು : ರಾಜ್ಯ ಸರ್ಕಾರದ ಗೃಹ ಜ್ಯೋತಿ ಯೋಜನೆಗೆ( Gruhajyoti Scheme) ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, 34 ಲಕ್ಷ ಮಂದಿ ಜನರು ಅರ್ಜಿ ಸಲ್ಲಿಸಿದ್ದಾರೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಐದು ಉಚಿತ ಯೋಜನೆಗಳ ಪೈಕಿ ಶಕ್ತಿ ಮತ್ತು ಗೃಹ ಜ್ಯೋತಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ, ಅರ್ಜಿ ಸಲ್ಲಿಕೆ ಆರಂಭಗೊಂಡ ದಿನದಿಂದ ಇದುವರೆಗೆ 34 ಲಕ್ಷ ಮಂದಿ ಜನರು ಅರ್ಜಿ ಸಲ್ಲಿಸಿದ್ದಾರೆ. ಸರ್ವರ್ ಸಮಸ್ಯೆಗಳ ನಡುವೆಯೂ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಯಾಗುತ್ತಿದೆ. ಅದೇ ರೀತಿ ಶಕ್ತಿ ಯೋಜನೆಗೆ ಕೂಡ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಕಳೆದ 13 ದಿನಗಳಲ್ಲಿ 6.57 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ.
KSRTC’, ‘BMTC’ ಬಸ್ ಗಳಿಗೆ ಮುಗಿಬಿದ್ದ ಮಹಿಳೆಯರು : ವೋಲ್ವೋ ಬಸ್ ಗಳಿಗೆ ‘ಶಕ್ತಿ’ ತುಂಬಿದ ಪುರುಷರು
ಉಚಿತ ಬಸ್ ಪ್ರಯಾಣದ ಹಿನ್ನೆಲೆ ‘KSRTC’, ‘BMTC’ ಬಸ್ ಹತ್ತಲು ಮಹಿಳೆಯರು ಮುಗಿಬಿದ್ದಿದ್ದಾರೆ. ಈ ಹಿನ್ನೆಲೆ ಸರ್ಕಾರಿ ಬಸ್ ಗಳು ಮಹಿಳೆಯರಿಂದ ತುಂಬಿ ತುಳುಕುತ್ತಿದೆ.
ಇದರಿಂದ ಬೇಸತ್ತ ಪುರುಷುರು ಬೆಂಗಳೂರಿನಲ್ಲಿ ವೋಲ್ವೋ ಬಸ್ ಗಳಿಗೆ ‘ಶಕ್ತಿ’ ತುಂಬಿದ್ದಾರೆ. ಹೌದು, ‘KSRTC’, ‘BMTC’ ಬಸ್ ಗಳು ರಶ್ ಇರುವ ಕಾರಣ ಪುರುಷರು ವೋಲ್ವೋ ಬಸ್ ಗೆ ಮುಗಿಬಿದ್ದಿದ್ದಾರೆ. ಕಳೆದ ಒಂದು ವಾರದಲ್ಲಿ ವೋಲ್ವೋ ಮತ್ತು ವಜ್ರ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯ ಏರಿಕೆಯಾಗಿದೆ. ‘KSRTC’, ‘BMTC’ ಬಸ್ ಗಳು ಮಹಿಳೆಯರಿಂದ ತುಂಬಿ ತುಳುಕುತ್ತಿರುವುದರಿಂದ ಬೆಂಗಳೂರಿನಲ್ಲಿ ಪುರುಷರು ವಾರದಲ್ಲಿ ವೋಲ್ವೋ ಮತ್ತು ವಜ್ರ ಬಸ್ಗಳತ್ತ ಮುಖ ಮಾಡಿದ್ದಾರೆ. ಜೂನ್ ತಿಂಗಳಲ್ಲಿ 21 ದಿನಗಳ ಲೆಕ್ಕಾಚಾರದ ಪ್ರಕಾರದ ಪ್ರತಿದಿನ 1,16,000 ಪ್ರಯಾಣಿಕರು ಸಂಚರಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಉಚಿತ ಬಸ್ ಪ್ರಯಾಣದ ಹಿನ್ನೆಲೆ ಪವಿತ್ರ ಕ್ಷೇತ್ರಗಳಿಗೆ ತೆರಳಲು ಮಹಿಳೆಯರು ಮುಗಿಬಿದ್ದಿದ್ದು, ಧರ್ಮಸ್ಥಳ, ಕುಕ್ಕೆ ಸುಭ್ರಮಣ್ಯಕ್ಕೆ , ಸೌತಡ್ಕ, ಕಟೀಲು, ಉಡುಪಿ ಶ್ರೀ ಕೃಷ್ಣ ದೇವಸ್ಥಾನಗಳು ಮಹಿಳಾ ಭಕ್ತರಿಂದ ತುಂಬಿ ತುಳುಕುತ್ತಿದೆ