ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವ ಹೆಚ್.ಕೆ.ಪಾಟೀಲ್, ಗೃಹಜ್ಯೋತಿ ಯೋಜನೆ ನಿಯಮದಲ್ಲಿ ಬದಲಾವಣೆ ಮಾಡಲಾಗಿದ್ದು, ಬಳಸಿದ ವಿದ್ಯುತ್ ನ ಶೇ 10ರಷ್ಟು ಉಚಿತ ಬದಲಾಗಿ 10 ಯುನಿಟ್ ಉಚಿತ ನೀಡಲು ತೀರ್ಮಾನಿಸಲಾಗಿದೆ ಎಂದರು.
ಈ ಮೊದಲು ಗೃಹಜ್ಯೋತಿ ಯೋಜನೆಯಡಿಯಲ್ಲಿ ಬಳಸಿದ ಯೂನಿಟ್ ಗಿಂತ್ ಶೇ.10ರಷ್ಟು ರಿಯಾತಿ ನೀಡಲಾಗುತ್ತಿತ್ತು. ಇದೀಗ ಶೇಕಡಾವಾರು ಬದಲಾಗಿ 10 ಯುನಿಟ್ ನೀಡಲು ಸಂಪುಟ ಸಭೆ ಸಮ್ಮತಿ ನೀಡಿದೆ ಎಂದು ತಿಳಿಸಿದರು.
ವಿದ್ಯುತ್ ನಿಗಮ ಪಡೆದಿದ್ದ 4450 ಕೋಟಿ ಸಾಲಕ್ಕೆ ಸರ್ಕಾರಿ ಖಾತರಿ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದರು.