
ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಶಿವರಾತ್ರಿಗೆ ಮುನ್ನ ಹಣ ಜಮಾ ಮಾಡುವ ಸಾಧ್ಯತೆ ಇದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ವರ್ಗಾವಣೆ ವಿಳಂಬವಾಗಿದೆ. ಶೀಘ್ರವೇ ಗೃಹಲಕ್ಷ್ಮಿ ಯೋಜನೆ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಲಿದೆ ಎಂದು ಹೇಳಿದ್ದಾರೆ.
ಈ ಹಿಂದಿನಂತೆ ಜಿಲ್ಲಾ ಉಪನಿರ್ದೇಶಕರ ಮೂಲಕ ಗೃಹಲಕ್ಷ್ಮಿ ಯೋಜನೆ, ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದೆ. ಉಪನಿರ್ದೇಶಕರ ಮೂಲಕ ಹಣ ಪಾವತಿಸಲಾಗುವುದು. ಆರ್ಥಿಕ ಇಲಾಖೆಯಿಂದ 15 ದಿನಗಳ ಹಿಂದೆಯೇ ಹಣ ಬಂದಿದೆ. ತಾಲೂಕು ಪಂಚಾಯಿತಿ ಕಚೇರಿಗಳಿಂದ ಇಲಾಖೆಗೆ ಹಣ ಬರುವುದು ವಿಳಂಬವಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.