ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನರಿಗೆ ಮಾಸಿಕ 2 ಸಾವಿರ ರೂಪಾಯಿ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಗಾಗಿ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳ ಅವಧಿಗೆ 4600 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
2023 -24 ನೇ ಸಾಲಿಗೆ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ 17500 ಕೋಟಿ ರೂ. ನಿಗದಿ ಮಾಡಲಾಗಿದ್ದು, ಮೊದಲ ಕಂತು 4375 ಕೋಟಿ ರೂ. ಬಿಡುಗಡೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಯೋಜನೆಗೆ ಸಂಬಂಧಿಸಿದ ಕ್ರಿಯಾ ಯೋಜನೆಗೆ ಅನುಮೋದನೆ ಪಡೆಯುವ ಷರತ್ತು ವಿಧಿಸಿ ಮೊದಲ ಕಂತಿನ ಅನುದಾನ 4,600 ಕೋಟಿ ರೂ. ಬಿಡುಗಡೆಗೆ ಆದೇಶಿಸಲಾಗಿದೆ. ಆಗಸ್ಟ್, ಸೆಪ್ಟೆಂಬರ್ ತಿಂಗಳಲ್ಲಿ ಮನೆಯೊಡತಿಯರ ಖಾತೆಗೆ ಹಣ ಸಂದಾಯ ಮಾಡಲಾಗಿದೆ.