ಬೆಳಗಾವಿ : ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪಕ್ರಿಯೆಯನ್ನು ಜುಲೈ 14ರಿಂದ ಆರಂಭಿಸಲಿದ್ದೇವೆ , ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಸರ್ಕಾರ ಪ್ರತ್ಯೇಕ್ ಆ್ಯಪ್ ಸಿದ್ದಪಡಿಸಿದ್ದು, ಈ ಹಿನ್ನೆಲೆ ಅರ್ಜಿ ಪ್ರಕ್ರಿಯೆ ಆರಂಭ ತಡವಾಗುತ್ತಿದೆ. : ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪಕ್ರಿಯೆಯನ್ನು ಜುಲೈ 14ರಿಂದ ಆರಂಭಿಸಲಿದ್ದೇವೆ , ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಆಗಸ್ಟ್ ತಿಂಗಳಿಂದ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಜಮಾ ಮಾಡಲಾಗುತ್ತದೆ. ಆಗಸ್ಟ್ 15ಕ್ಕೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆ ಆಗಲಿದೆ. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ಗಳಲ್ಲಿ ಯಜಮಾನಿ ಎಂದು ಗುರುತಿಸಿಕೊಂಡ ಮಹಿಳೆಯರಿಗೆ ಈ ಯೋಜನೆಯ ಲಾಭ ಸಿಗಲಿದೆ’ ಎಂದು . ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಗೃಹ ಲಕ್ಷ್ಮಿ ಜಾರಿಗೆ ಪ್ರತಿ ಜಿಲ್ಲೆಗೂ 50 ರಿಂದ 100 ಜನ ಪ್ರಜಾ ಪ್ರತಿನಿಧಿಗಳನ್ನು ನೇಮಕ ಮಾಡಲಾಗಿದ್ದು, ಅವರೇ ನಿಮ್ಮ ಊರಿಗೆ ಬಂದು ಅರ್ಜಿಗಳನ್ನು ಭರ್ತಿ ಮಾಡಲಿದ್ದಾರೆ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸ್ವೀಕಾರ ಪ್ರಕ್ರಿಯೆ ನಿರಂತರವಾಗಿ ಇರಲಿದೆ ಎಂದು ಹೇಳಿದರು.