ಮೈಸೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮನೆ ಯಜಮಾನಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಇಂದು ಅಧಿಕೃತವಾಗಿ ಚಾಲನೆ ನೀಡಲಾಗುತ್ತಿದೆ. ಈ ನಡುವೆ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಡಬಲ್ ಗಿಫ್ಟ್ ನೀಡಲು ಮುಂದಾಗಿದೆ.
ರಾಜ್ಯ ಸರ್ಕಾರದ ವತಿಯಿಂದ ರಾಜ್ಯದ 1.10 ಕೋಟಿ ಮಹಿಳೆಯರ ಖಾತೆಗೆ ಇಂದು 2,000 ರೂ. ಹಣ ವರ್ಗಾವಣೆ ಮಾಡಲಾಗುತ್ತದೆ. ಜೊತೆಗೆ ರಾಜ್ಯದ 40 ಸಾವಿರಕ್ಕೂ ಹೆಚ್ಚು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೂ ಗೃಹ ಲಕ್ಷ್ಮೀ ಹಣ ವರ್ಗಾವಣೆ ಆಗಲಿದೆ. ಮನೆಯ ಯಜಮಾನಿ ಆಗಿದ್ದರೂ ಅವರ ಖಾತೆಗೆ ಸೇವೆಯ ಅನುಗುಣವಾಗಿ ಡಬಲ್ ಹಣ ಸಿಗಲಿದೆ. ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿಗೆ 2,000 ರೂ. ಜೊತೆಗೆ ಆಶಾ ಕಾರ್ಯಕರ್ತೆ ಸೇವೆಯ ಅನುಗುಣದಲ್ಲಿ 2,000 ರೂ. ಸೇರಿ 4,000 ರೂ. ಜಮಾವಣೆ ಮಾಡಲಾಗುತ್ತದೆ ಎನ್ನಲಾಗಿದೆ.