alex Certify Gruhalakshmi Scheme : ಆ.27ಕ್ಕೆ `ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ : ಅರ್ಜಿ ಸಲ್ಲಿಸದ ಯಜಮಾನಿಯರಿಗೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Gruhalakshmi Scheme : ಆ.27ಕ್ಕೆ `ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ : ಅರ್ಜಿ ಸಲ್ಲಿಸದ ಯಜಮಾನಿಯರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಳಗಾವಿ : ರಾಜ್ಯ ಸರ್ಕಾರದ 4 ನೇ ಗ್ಯಾರಂಟಿ ಮನೆಯ ಯಜಮಾನಿಗೆ 2,000 ರೂ. ಮಾಸಾಶನ ನೀಡುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ಮುಹೂರ್ತ  ಫಿಕ್ಸ್ ಆಗಿದ್ದು,  ಆಗಸ್ಟ್ 27 ರಂದು ಬೆಳಗವಿಯಲ್ಲಿ ಚಾಲನೆ ನೀಡುತ್ತೇವೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ರೇಷನ್ ಕಾರ್ಡ್ ಇಲ್ಲದವರು ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಸಲು ಏನು ಮಾಡಬೇಕು.? ಇಲ್ಲಿದೆ ಮಾಹಿತಿ.ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು, ಯಾವುದೇ ಫಲಾನುಭವಿಗಳು ಬೇಸರಗೊಳ್ಳುವ ಅಗತ್ಯ ಇಲ್ಲ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಕಡೆ ದಿನಾಂಕ ಇಲ್ಲ, ಇದು ನಿರಂತರ ಪ್ರಕ್ರಿಯೆ ಆಗಿರುವುದರಿಂದ ಯಾರೆಲ್ಲಾ ರೇಷನ್ ಕಾರ್ಡ್ ಹೊಂದಿಲ್ಲ ಅಥವಾ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ, ಮಿಸ್ಟೇಕ್ ಇರುವ ಕಾರಣಕ್ಕಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲಾಗುತ್ತಿಲ್ಲ ಅವರೆಲ್ಲ ಇದನ್ನು ಸರಿಪಡಿಸಿಕೊಂಡ ನಂತರ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ. ರೇಷನ್ ಕಾರ್ಡ್’ ಇಲ್ಲದವರು ಹೊಸದಾಗಿ ಮಾಡಿಸಿಕೊಂಡು ಅರ್ಜಿ ಸಲ್ಲಿಸಿ ಎಂದರು.

ಅದೇ ರೀತಿ ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಮಾಡಲು ಅನುಮೋದನೆ ನೀಡಿದೆ. ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರವು, ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿಯ ತಿದ್ದುಪಡಿ ಹಾಗೂ ಹೆಚ್ಚುವರಿಗೆ ಫಲಾನುಭವಿಗಳ ಹೆಸರನ್ನು ಸೇರ್ಪಡೆ ಮಾಡಲು ಅನುಮೋದನೆಯನ್ನು ನೀಡಲಾಗಿದೆ. ಮುಂದುವರೆದು ಮುಂದಿನ ಆದೇಶದವರೆಗೆ ಯಾವುದೇ ಹೊಸ ಪಡಿತರ ಚೀಟಿಯನ್ನು ಮಂಜೂರು ಮಾಡದಂತೆ ನಿರ್ದೇಶಿಸಿದೆ.

ಬಿಪಿಎಲ್ ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಿರುವವರಿಗೆ ಕಾರ್ಡ್ಗಳನ್ನು ಆದಷ್ಟು ಬೇಗ ನೀಡುವ ಪ್ರಕ್ರಿಯೆಯನ್ನು ಸರ್ಕಾರ ನಡೆಸಲಿದೆ. ಎಲ್ಲ ಅರ್ಜಿಗಳನ್ನು ಪರಿಶೀಲಿಸಿ ಕಾರ್ಡ್ ವಿತರಿಸಲಾಗುವುದು’ ಎಂದು ಸಚಿವ ಕೆ.ಎಚ್ ಮುನಿಯಪ್ಪ ಹೇಳಿದ್ದರು. ಆದರೆ ಇದೀಗ ಮುಂದಿನ ಆದೇಶದವರೆಗೆ ಯಾವುದೇ ಹೊಸ ಪಡಿತರ ಚೀಟಿಯನ್ನು ಮಂಜೂರು ಮಾಡದಂತೆ ನಿರ್ದೇಶಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...