
ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಹಣ ವಿಳಂಬ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಾರ್ಚ್ 31ರ ಬಳಿಕ ಹಣ ಬಿಡುಗಡೆಯಗಾಲಿದೆ ಎಂದಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಾರ್ಚ್ 31ರ ಬಳಿಕ ಗೃಹಲಕ್ಷ್ಮೀ ಯೋಜನೆಯ ಎರಡು ಕಂತಿನ ಹಣ ಬಿಡುಗಡೆಯಾಗಲಿದೆ ಎಂದು ಹೇಳಿದರು.
ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 2 ಸಾವಿರ ರೂಪಾಯಿಗೆ ಹೆಚ್ಚಿಸಿದ್ದೆವು. ಅದಾದ ಬಳಿಕ ಯಾವುದೇ ಸರ್ಕಾರ ಹೆಚ್ಚಿಸಿರಲಿಲ್ಲ. ಈ ಬಾರಿ ಬಜೆಟ್ ನಲ್ಲಿ ನಮ್ಮ ಸರ್ಕಾರ ಕಾರ್ಯಕರ್ತೆಯರ ಗೌರವಧನ 1 ಸಾವಿರ, ಸಹಾಯಕಿಯರ ಗೌರವ ಧನ 750 ರೂಪಾಯಿ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದೇವೆ. ಅದನ್ನು ಜಾರಿಗೆ ತರುತ್ತೇವೆ ಎಂದರು.