
ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಹಣ ವಿಳಂಬವಾಗಿರುವ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಇಲಕಹೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ ನೀಡಿದ್ದಾರೆ.
ಕಳೆದ ಮೂರು ತಿಂಗಳಿಂದ ಗೃಹಲಕ್ಷ್ಮೀ ಯೋಜನೆ ಹಣ ಖಾತೆಗೆ ಜಮೆ ಆಗಿಲ್ಲ ಎಂದು ಫಲಾನುಭವಿಗಳು ಆಕ್ರೋಶ ವ್ಯಕ್ತಪಡಿಸಿರುವ ಬೆನ್ನಲ್ಲೇ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ನಾನು ಆಸ್ಪತ್ರೆಗೆ ದಾಖಲಾಗಿದ್ದ ಕಾರಣ 3 ತಿಂಗಳು ಯೋಜನೆ ಹಣ ಬಿಡುಗಡೆಗೆ ವಿಳಂಬವಾಗಿದೆ. ನಾನು ಕಾರ್ಯನಿರ್ವಹಿಸುತ್ತಿದ್ದಾಗ ಹಣಕಾಸು ಇಲಾಖೆಗೆ ಒತ್ತಡ ತಂದು ಹಣ ಬಿಡುಗಡೆ ಮಾಡಿಸುತ್ತಿದ್ದೆ ಎಂದಿದ್ದಾರೆ.
ಇನ್ನೊಂದು ವಾರ 10 ದಿನಗಳಲ್ಲಿ ಗೃಹಲಕ್ಷ್ಮೀ ಹಣ ಫಲಾನುಭವಿಗಳ ಖಾತೆಗೆ ಜಮೆ ಆಗಲಿದೆ. ನನಗೆ ಅಪಘಾತವಾಗಿ 40 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದೆ. ಹಾಗಾಗಿ ಗೃಹಲಕ್ಷ್ಮೀ ಯೋಜನೆಯ ಹಣ ಹಾಕುವ ಪ್ರಕ್ರಿಯೆಯಲ್ಲಿ ವಿಳಂಬವಾಗಿದೆ. ಇನ್ನೊಂದು ವಾರದಲ್ಲಿ ಮೂರು ತಿಂಗಳ ಹಣ ಒಟ್ಟಿಗೆ ಖಾತೆಗೆ ಜಮೆ ಆಗಲಿದೆ ಎಂದು ತಿಳಿಸಿದರು.