alex Certify Gruhalakshmi Scheme : ಆಗಸ್ಟ್ 30 ರಂದೇ `ಯಜಮಾನಿಯ’ರ ಖಾತೆಗೆ ಹಣ ಜಮಾ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Gruhalakshmi Scheme : ಆಗಸ್ಟ್ 30 ರಂದೇ `ಯಜಮಾನಿಯ’ರ ಖಾತೆಗೆ ಹಣ ಜಮಾ!

ಮೈಸೂರು : ಆಗಸ್ಟ್ 30ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ  ಅದ್ಧೂರಿ ಚಾಲನೆ ಸಿಗಲಿದೆ. ಅಂದೇ ಫಲಾನುಭವಿಗಳ ಖಾತೆಗೆ 2,000 ರೂ. ಹಣ ಜಮಾ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ 1.10 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದು, ಆಗಸ್ಟ್ 30 ರಂದು ಮೈಸೂರಿನಲ್ಲಿ ಯೋಜನೆಗೆ ಅಧಿಕೃತ ಚಾಲನೆ ನೀಡಲಾಗುವುದು  ಹೇಳಿದ್ದಾರೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೀಡುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರಚೀಟಿಗಳಲ್ಲಿ ನಮೂದಾಗಿರುವ ಮನೆಯ ಯಜಮಾನಿಯ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ  ನೇರ ನಗದು ವರ್ಗಾವಣೆ ಅಥವಾ ಆಧಾರ್ ಲಿಂಕ್ ಆಗದಿರುವ ಬ್ಯಾಂಕ್ ಖಾತೆಗೆ ಆರ್‍ಟಿಜಿಎಸ್ ಮೂಲಕ ಮಾಸಿಕ ರೂ.2,000/- ವಿತರಿಸಲಾಗುತ್ತದೆ. ಆದರೆ ಕುಟುಂಬದ ಯಜಮಾನಿ, ಗಂಡ ತೆರಿಗೆ ಪಾವತಿಸುತ್ತ್ತಿದ್ದರೆ ಈ ಯೋಜನೆಯ ಲಾಭ ಪಡೆಯಲು ಬರುವುದಿಲ್ಲ. ಫಲಾನುಭವಿಗಳ ನೋಂದಣಿಯು ಹತ್ತಿರದ ಗ್ರಾಮ ಪಂಚಾಯಿತಿ ಕಚೇರಿ, ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಗ್ರಾಮದ ಪ್ರಜಾಪ್ರತಿನಿಧಿಗಳನ್ನು ನೇಮಿಸಿದೆ. ಪ್ರಜಾಪ್ರತಿನಿಧಿಗಳು ನೋಂದಣಿಗಾಗಿ ಮನೆ ಮನೆಗಳಿಗೆ ಭೇಟಿ ನೀಡುತ್ತಾರೆ. ಅವರ ಸಹಾಯದಿಂದಲೂ ನೋಂದಾಯಿಸಿಕೊಳ್ಳಬಹುದು.

 ಈಗಾಗಲೇ ಮಹಿಳಾ ಫಲಾನುಭವಿಗಳನ್ನು ನೋಂದಣಿ ಮಾಡಿಸಿಕೊಂಡಿದ್ದು, ಕಾರ್ಯಕ್ರಮವನ್ನು ನೇರವಾಗಿ ವೀಕ್ಷಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಶಾಲೆಗಳು ಅಥವಾ ಶಾಲಾ ಆವರಣಗಳನ್ನು ಹೊರತುಪಡಿಸಿ, ಸಮುದಾಯ ಭವನ, ಚೌಲ್ಟ್ರಿಗಳು ಹಾಗೂ ಗ್ರಾಮೀಣ ಭಾಗಗಳಲ್ಲಿರುವ ಸಭಾಂಗಣಗಳಲ್ಲಿ ಟಿವಿ ಹಾಗೂ ಎಲ್‍ಇಡಿ ಪರದೆ ಮೂಲಕ ಈ ಕಾರ್ಯಕ್ರಮವನ್ನು ನೇರವಾಗಿ ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ವೀಕ್ಷಣೆ ಮಾಡಲು ಅಗತ್ಯ ಕ್ರಮವಹಿಸಬೇಕು.  ಇದಕ್ಕಾಗಿ ಅಗತ್ಯ ಇಂಟರ್‍ನೆಟ್ ವ್ಯವಸ್ಥೆ ಸಮರ್ಪಕವಾಗಿ ಕಲ್ಪಿಸಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...