Gruhalakshmi Scheme : ನಾಳೆ 1.10 ಕೋಟಿ ಮಹಿಳೆಯರ ಖಾತೆಗೆ 2,000 ರೂ. ಜಮಾ : ಸಿಎಂ ಸಿದ್ದರಾಮಯ್ಯ

ಮೈಸೂರು : ರಾಜ್ಯ ಸರ್ಕಾರದ ಮಹತ್ವದ ಗೃಹಲಕ್ಷ್ಮೀ ಯೋಜನೆಗೆ ನಾಳೆ ಚಾಲನೆ ನೀಡಲಾಗುತ್ತಿದ್ದು, 1.10 ಕೋಟಿ ಮಹಿಳೆಯರ ಖಾತೆಗೆ 2,000 ರೂ. ಜಮಾ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಗೆ ನಾಳೆ ಅಧಿಕೃತವಾಗಿ ಚಾಲನೆ ನೀಡಲಾಗುತ್ತದೆ. ನಾಲೆಯ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹ ಭಾಗಿಯಾಗಲಿದ್ದಾರೆ. 1.10 ಕೋಟಿ ಫಲಾನುಗಳಿಗೆ ಹಣ ಬಿಡುಗಡೆ ಮಾಡುತ್ತೇವೆ. ಮಹಿಳೆಯರ ಖಾತೆಗೆ ನಾಳೆಯೇ ಹಣ ಜಮಾ ಆಗಲಿದೆ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ಹರಕೆ ಸಲ್ಲಿಸಿದರು. ತಾಯಿ ಚಾಮುಂಡೇಶ್ವರಿಗೆ ಹಸಿರು ಮತ್ತು ಕೆಂಪು ಸೀರೆ ನೀಡಿ ಹರಕೆ ಸಲ್ಲಿಸಿದರು. ಕಾಂಗ್ರೆಸ್ ಗ್ಯಾರಂಟಿ ಯೋಜನೆ ಯಶಸ್ವಿಯಾಗಲೆಂದು ಹರಕೆ ಕಟ್ಟಿಕೊಂಡಿದ್ದರು. ಇಂದು ಚಾಮುಂಡಿ ದೇವಿಗೆ ಹರಕೆ ಒಪ್ಪಿಸಿದರು. ಗ್ಯಾರಂಟಿ ಕಾರ್ಡ್ ಇಟ್ಟು ಪೂಜೆ ಸಲ್ಲಿಸುವಾಗ ಹರಕೆ ಕಟ್ಟಿಕೊಂಡಿದ್ದರು. ಅದರಂತೆ ಈಗ ಹರಕೆ ಸಲ್ಲಿಸಿದ್ದಾರೆ. ಕನಕಾಂಬರ, ಮಲ್ಲಿಗೆ, ಗುಲಾಬಿ ಸೇರಿ ವಿವಿಧ ಬಗೆಯ ಹೂವಿನ ಹಾರ ಮತ್ತು ಫಲ ಸಮರ್ಪಣೆ ಮಾಡಿದರು.ಅಲ್ಲದೇ ನಾಳೆ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತಿದ್ದು, ಈಗಾಗಲೇ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ದತೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read