alex Certify Gruhalakshmi Scheme : ಗೃಹಲಕ್ಷ್ಮೀ ಫಲಾನುಭವಿಗಳಿಗೂ `ಸ್ಮಾರ್ಟ್ ಕಾರ್ಡ್’ ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Gruhalakshmi Scheme : ಗೃಹಲಕ್ಷ್ಮೀ ಫಲಾನುಭವಿಗಳಿಗೂ `ಸ್ಮಾರ್ಟ್ ಕಾರ್ಡ್’ ವಿತರಣೆ

 

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ.ಮಾಸಾಶನ ನೀಡುವ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೂ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕೆಪಿಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ರಾಜೀವ್ ಗಾಂಧಿ, ದೇವರಾಜ್ ಅರಸ್ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಗೃಹಲಕ್ಷ್ಮೀ ಫಲಾನುಭವಿಗಳಿಗೆ ಕ್ಯುಆರ್ ಕೋಡ್ ಇರುವ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುವುದು. ಸ್ಮಾರ್ಟ್ ಕಾರ್ಡ್ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ತಮ್ಮ ಭಾವಚಿತ್ರ ಇರಲಿದೆ ಎಂದರು.

ಸ್ಮಾರ್ಟ್ ಕಾರ್ಡ್ ನಲ್ಲಿ 2,000 ರೂ. ಎಂದು ಬರಲಿದೆ. ಹಿಂಭಾಗದಲ್ಲಿ ಫಲಾನುಭವಿ ಮಹಿಳೆಯ ಭಾವಚಿತ್ರ ಹಾಗೂ ಕ್ಯೂಆರ್ ಕೋಡ್ ಇರಲಿದೆ. ಇದನ್ನು ಸ್ಕ್ಯಾನ್ ಮಾಡಿದ್ರೆ ಫಲಾನುಭವಿಯ ಸಂಪೂರ್ಣ ವಿವರ ಹಾಗೂ ಯಾವಾಗ ಹಣ ಬಿಡುಗಡೆಯಾಗಲಿದೆ ಎಂಬ ಮಾಹಿತಿ ಇರಲಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...