ಬೆಂಗಳೂರು: ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದ ಹಲವು ಮಹಿಳೆಯರ ಖಾತೆಗೆ ಹಣ ಬಾರದಿರುವುದಕ್ಕೆ ದೂರುಗಳು ಬರುತ್ತಿದ್ದಂತೆ ಎಚ್ಚೆತ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು ಒನ್ ಸೆಂಟರ್ ಗೆ ಭೇಟಿ ನೀಡಿ ಪ್ರತಿ ಜಿಲ್ಲೆಯ ಮಾಹಿತಿಗಳನ್ನು ಪಡೆದರು.
ಗೃಹಲಕ್ಷ್ಮೀ ಅರ್ಜಿ ಬಾಕಿ ಇರುವ ಬಗ್ಗೆ ಹಾಗೂ ಶೀಘ್ರವಾಗಿ ವಿಲೇವಾರಿ ಮಾಡುವಂತೆ ಆಯಾ ಜಿಲ್ಲಾ ಸಿಡಿಪಿಒಗಳಿಗೆ ಸೂಚನೆ ನೀಡಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, 15 ದಿನದೊಳಗೆ ಎಲ್ಲರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮೀ ಹಣ ಬರಲಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಮಹಿಳೆಯರ ಖಾತೆಗೆ ಹಣ ಹೋಗಿಲ್ಲ ಎಂದು ತಿಳಿಸಿದರು.
ತಾಂತ್ರಿಕ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದಿದ್ದೇನೆ. 15 ದಿನಗಳಲ್ಲಿ ಮಹಿಳೆಯರ ಖಾತೆಗೆ ಹಣ ಬರಲಿದೆ. ಮೂರು ತಿಂಗಳ ಹಣ ಫಲಾನುಭವಿಗಳ ಖಾತೆಗೆ ಒಟ್ಟಿಗೆ ವರ್ಗಾವಣೆಯಾಗಲಿದೆ ಎಂದು ಹೇಳಿದರು.