ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ನಡೆದ ಶಿಬಿರದಲ್ಲಿ ಸುಮಾರು 3.48 ಲಕ್ಷ ಗ್ರಾಮೀಣ ಮಹಿಳೆಯರು ದಾಖಲಾತಿ ಪರಿಶೀಲನೆ ಮಾಡಿಸಿದ್ದಾರೆ.
ಒಟ್ಟು 3,48,386 ಮಹಿಳೆಯರು ಶಿಬಿರದಲ್ಲಿ ಭಾಗವಹಿಸಿ ತಮ್ಮ ಆಧಾರ್ ಕಾರ್ಡ್ ಪುನರ್ ಪರಿಶೀಲನೆಗೆ ಒಳಪಡಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
32,201 ಮಂದಿ ಮಹಿಳೆಯರು ಹೊಸದಾಗಿ ಅಂಚೆ ಕಚೇರಿಯ ಐಪಿಬಿ ಖಾತೆಗಳನ್ನು ತೆರೆದಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪುನರ್ ಪರಿಶೀಲನೆಗೆ ಒಳಪಟ್ಟ ಆಧಾರ್ ಕಾರ್ಡ್, ಐಪಿಪಿಬಿ ಖಾತೆ ಆಧರಿಸಿ ಗೃಹಲಕ್ಷ್ಮಿ ಅರ್ಜಿಗಳ ಪರಿಶೀಲನೆ ನಡೆಯಲಿದೆ. ಅನೇಕ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಪಾವತಿಯಾಗಿಲ್ಲ ಎನ್ನುವ ದೂರುಗಳ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಪರಿಶೀಲನೆ ಶಿಬಿರ ಹಮ್ಮಿಕೊಳ್ಳಲಾಗಿತ್ತು.