ಬೆಂಗಳೂರು: ನಾಡ ದೇವತೆ ಚಾಮುಂಡೇಶ್ವರಿ ದೇವಿಗೆ ಗೃಹಲಕ್ಷ್ಮಿ ಯೋಜನೆ ಅನ್ವಯ ಪ್ರತಿ ತಿಂಗಳು 2000 ರೂ. ಅರ್ಪಿಸಲಾಗುವುದು.
ಚಾಮುಂಡೇಶ್ವರಿ ದೇವಿಗೆ ಗೃಹಲಕ್ಷ್ಮಿ ಯೋಜನೆ ಅರ್ಪಿಸಲಾಗಿದೆ. ಪ್ರತಿ ತಿಂಗಳು ಚಾಮುಂಡೇಶ್ವರಿ ದೇವಾಲಯಕ್ಕೆ 2000 ರೂ. ಅರ್ಪಿಸಲು ಸರ್ಕಾರ ಅಸ್ತು ಎಂದಿದೆ. ಚಾಮುಂಡೇಶ್ವರಿ ದೇಗುಲಕ್ಕೆ ಪ್ರತಿ ತಿಂಗಳು 2000 ರೂ. ನೀಡುವಂತೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಬರೆದಿದ್ದ ಪತ್ರಕ್ಕೆ ಸರ್ಕಾರ ಸ್ಪಂದಿಸಿದೆ.
ದಿನೇಶ್ ಅವರ ಪತ್ರಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಂದಿಸಿದ್ದು, ಪ್ರತಿ ತಿಂಗಳು ಚಾಮುಂಡೇಶ್ವರಿ ದೇಗುಲಕ್ಕೆ 2000 ರೂ. ಅರ್ಪಿಸಲಾಗುವುದು ಎಂದು ಹೇಳಲಾಗಿದೆ.