ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ತಾಂತ್ರಿಕ ಸಮಸ್ಯೆ ಬಗೆಹರಿಸಿ ಬಾಕಿ ಉಳಿದ ಫಲಾನುಭವಿಗಳ ಖಾತೆಗೆ ಶೀಘ್ರವೇ ಹಣ ಪಾವತಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಕಚೇರಿಯಲ್ಲಿ ಗುರುವಾರ ನಡೆದ ಗೃಹಲಕ್ಷ್ಮಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಯೋಜನೆಯ ಫಲಾನುಭವಿಗಳಿಗೆ ಶೀಘ್ರವೇ ಹಣ ಸಂದಾಯ ಮಾಡಬೇಕು. ತಾಂತ್ರಿಕ ಕಾರಣದಿಂದ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳ ಖಾತೆಗೆ ಹಣ ಪಾವತಿಸಲು ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ತಿಳಿಸಿದ್ದಾರೆ.
ಆಗಸ್ಟ್ ನಲ್ಲಿ ಶೇಕಡ 88 ರಷ್ಟು ಮಂದಿ ಖಾತೆಗೆ ಹಣ ಪಾವತಿಸಲಾಗಿದೆ. ಸೆಪ್ಟಂಬರ್ ತಿಂಗಳ ಹಣ ಹಂತ ಹಂತವಾಗಿ ಸಂದಾಯವಾಗುತ್ತಿದೆ. ಅಕ್ಟೋಬರ್ ತಿಂಗಳ ಹಣ ಶೇಕಡ 100ರಷ್ಟು ಫಲಾನುಭವಿಗಳಿಗೆ ಸಂದಾಯವಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದಾರೆ.
ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಬೇರೆ ಇಲಾಖೆಗಳ ಸಹಕಾರ ಪಡೆದುಕೊಳ್ಳಿ. ಅಂಗನವಾಡಿ ಕಾರ್ಯಕರ್ತೆಯರ ನೆರವಿನಿಂದ ಮನೆ ಮನೆಗೆ ತೆರಳಿ ನೋಂದಣಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಅವರು ತಿಳಿಸಿದ್ದಾರೆ.