
ಮೈಸೂರು: ಗೃಹಲಕ್ಷ್ಮಿ ಯೋಜನೆಯಡಿ ಆಗಸ್ಟ್ 17ರ ನಂತರ ಫಲಾನುಭವಿಗಳ ಖಾತೆಗೆ 2000 ರೂ. ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಆಷಾಢಮಾಸದ ಪ್ರಯುಕ್ತ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಚಿವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಯೋಜನೆಗಾಗಿ ಪ್ರತ್ಯೇಕ ಆ್ಯಪ್ ಸಿದ್ದಪಡಿಸಲಾಗಿದೆ. ಈ ಆ್ಯಪ್ ಮೂಲಕ ಅರ್ಜಿ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಜೂನ್ 27ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಮುಖ್ಯಮಂತ್ರಿಗಳಿಗೆ ಆ್ಯಪ್ ತೋರಿಸಿ ವಿವರಿಸುತ್ತೇವೆ. ನಂತರ ಅರ್ಜಿ ಸಲ್ಲಿಕೆಗೆ ಆ್ಯಪ್ ಬಿಡುಗಡೆ ಮಾಡಲಾಗುವುದು. ಆಗಸ್ಟ್ 17ರ ನಂತರ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ, ಶುಲ್ಕವೂ ಇರುವುದಿಲ್ಲ. ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆ್ಯಪ್ ರಚಿಸಲಾಗಿದ್ದು, ಇದರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಿದ್ದಾರೆ.