ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಲು ಹಣ ಪಡೆಯುವಂತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಹಣ ಪಡೆದಿರುವುದು ಕಂಡು ಬಂದ ಕೂಡಲೇ ಕ್ರಮ ಕೈಗೊಳ್ಳುತ್ತೇವೆ. ಖಾಸಗಿ ಸೈಬರ್ ಸೆಂಟರ್ ಗಳಲ್ಲಿ ಅರ್ಜಿ ಸಲ್ಲಿಕೆಗೆ ಲಿಂಕ್ ನೀಡಿಲ್ಲ. ಅಕ್ರಮವಾಗಿ ಲಿಂಕ್ ಪಡೆದುಕೊಂಡು ಅರ್ಜಿ ಸಲ್ಲಿಸಿರುವುದು ಕಂಡು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರಿನ ಜೆಪಿ ನಗರದ ಅರಕೆರೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು 150 -200 ರೂಪಾಯಿ ವಸೂಲಿ ಮಾಡಲಾಗುತ್ತಿದೆ ಎಂಬ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾಳೆಯೇ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.