
ಬೆಳಗಾವಿ: ಗೃಹಲಕ್ಷ್ಮಿ ಯೋಜನೆಗೆ ಸಾಫ್ಟ್ವೇರ್ ಮತ್ತು ಆ್ಯಪ್ ಸಿದ್ಧಪಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಳಗಾವಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಗಾಗಿ ಶೀಘ್ರವೇ ಅರ್ಜಿ ಬಿಡುಗಡೆ ಮಾಡಲಾಗುವುದು. ಯೋಜನೆಯ ತ್ವರಿತ ಅನುಷ್ಠಾನಕ್ಕೆ ತಾಂತ್ರಿಕ ತೊಂದರೆ ಉಂಟಾಗುತ್ತಿದ್ದು, ಸಾಫ್ಟ್ವೇರ್ ಮತ್ತು ಅಪ್ಲಿಕೇಶನ್ ಸಿದ್ಧಪಡಿಸಲಾಗುತ್ತಿದೆ. ಯೋಜನೆಗೆ ಸಂಬಂಧಿಸಿದಂತೆ ಪ್ರತಿಯೊಬ್ಬಲ್ಲಿ ನಾಲ್ವರನ್ನು ನೇಮಕ ಮಾಡಲಾಗುವುದು ಎಂದು ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಿಂದ 1.13 ಕೋಟಿ ಕುಟುಂಬಗಳಿಗೆ ಸೌಲಭ್ಯ ಸಿಗಲಿದೆ. ಯೋಜನೆ ಜಾರಿಯಾದ ಬಳಿಕ ಗೊಂದಲವಾಗಬಾರದು ಎನ್ನುವ ಕಾರಣಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಂಡು ಸಾಫ್ಟ್ವೇರ್ ಸಿದ್ದಪಡಿಸಲಾಗುತ್ತಿದೆ. ಆದಷ್ಟು ಶೀಘ್ರವೇ ಗೃಹಲಕ್ಷ್ಮಿ ಯೋಜನೆಗೆ ಸಾಫ್ಟ್ವೇರ್ ಮತ್ತು ಅಪ್ಲಿಕೇಶನ್ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ ಮನೆಗೆ ಯಜಮಾನಿ ಖಾತೆಗೆ 2,000 ರೂ. ಜಮಾ ಮಾಡಲಾಗುವುದು.