ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ.
ಗೃಹಲಕ್ಷ್ಮಿ ಯೋಜನೆಯ ಪೋಸ್ಟರ್ ಮತ್ತು ಲಾಂಛನ ಬಿಡುಗಡೆ ಮಾಡಲಾಗಿದ್ದು, ಯೋಜನೆಯ ನೋಂದಣಿ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ವಿಧಾನಸೌಧದಲ್ಲಿ ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದ್ದಾರೆ.
ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಕೆ.ಹೆಚ್. ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ಬೈರತಿ ಸುರೇಶ್, ಶಾಸಕ ರಿಜ್ವಾನ್ ಅರ್ಷದ್ ಮೊದಲಾದವರು ಇದ್ದರು. ಕಾರ್ಯಕ್ರಮದಲ್ಲಿ ಮೂವರು ಮಹಿಳೆಯರಿಗೆ ಸಾಂಕೇತಿಕವಾಗಿ ಗೃಹ ಲಕ್ಷ್ಮಿ ಯೋಜನೆ ಮಂಜೂರಾತಿ ಪತ್ರ ನೀಡಲಾಗಿದೆ.