ಮಂಡ್ಯ: ಮನೆಯ ಯಜಮಾನಿಯರ ಖಾತೆಗೆ 2000 ರೂ. ಜಮಾ ಮಾಡುವ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ರಂದು ಮೈಸೂರಿನಲ್ಲಿ ರಾಹುಲ್ ಗಾಂಧಿ ಚಾಲನೆ ನೀಡಲಿದ್ದಾರೆ.
ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ವಿವಿಧ ಕಾರಣಗಳಿಂದ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ದಿನಾಂಕ ಮುಂದೂಡಲಾಗಿದ್ದು, ಈಗ ದಿನಾಂಕವನ್ನು ಅಂತಿಮಗೊಳಿಸಲಾಗಿದೆ. ಮೈಸೂರಿನಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಿ, ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಈ ಮೊದಲು ಗೃಹಲಕ್ಷ್ಮಿ ಯೋಜನೆಗೆ ಬೆಳಗಾವಿಯಲ್ಲಿ ಚಾಲನೆ ನೀಡಲು ತೀರ್ಮಾನಿಸಲಾಗಿತ್ತು. ದಿನಾಂಕವನ್ನು ಕೂಡ ಹಲವು ಬಾರಿ ಮುಂದೂಡಲಾಗಿತ್ತು. ಈಗ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ರಂದು ಚಾಲನೆ ನೀಡಲಾಗುವುದು ಎಂದು ಹೇಳಲಾಗಿದೆ.