alex Certify ಮಹಿಳೆಯರ ಖಾತೆಗೆ 2000 ರೂ. ಪಾವತಿಸುವ ‘ಗೃಹಲಕ್ಷ್ಮಿ’ ಯೋಜನೆಗೆ ಆ. 30ರಂದು ಮೈಸೂರಿನಲ್ಲಿ ರಾಹುಲ್ ಗಾಂಧಿ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯರ ಖಾತೆಗೆ 2000 ರೂ. ಪಾವತಿಸುವ ‘ಗೃಹಲಕ್ಷ್ಮಿ’ ಯೋಜನೆಗೆ ಆ. 30ರಂದು ಮೈಸೂರಿನಲ್ಲಿ ರಾಹುಲ್ ಗಾಂಧಿ ಚಾಲನೆ

ಮಂಡ್ಯ: ಮನೆಯ ಯಜಮಾನಿಯರ ಖಾತೆಗೆ 2000 ರೂ. ಜಮಾ ಮಾಡುವ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ರಂದು ಮೈಸೂರಿನಲ್ಲಿ ರಾಹುಲ್ ಗಾಂಧಿ ಚಾಲನೆ ನೀಡಲಿದ್ದಾರೆ.

ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ವಿವಿಧ ಕಾರಣಗಳಿಂದ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ದಿನಾಂಕ ಮುಂದೂಡಲಾಗಿದ್ದು, ಈಗ ದಿನಾಂಕವನ್ನು ಅಂತಿಮಗೊಳಿಸಲಾಗಿದೆ. ಮೈಸೂರಿನಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಿ, ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಈ ಮೊದಲು ಗೃಹಲಕ್ಷ್ಮಿ ಯೋಜನೆಗೆ ಬೆಳಗಾವಿಯಲ್ಲಿ ಚಾಲನೆ ನೀಡಲು ತೀರ್ಮಾನಿಸಲಾಗಿತ್ತು. ದಿನಾಂಕವನ್ನು ಕೂಡ ಹಲವು ಬಾರಿ ಮುಂದೂಡಲಾಗಿತ್ತು. ಈಗ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ರಂದು ಚಾಲನೆ ನೀಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...