ಹಾವೇರಿ: ಗೃಹಪ್ರವೇಶದ ಊಟ ಸೇವಿಸಿದ್ದ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ತಿಮ್ಮೇನಹಳ್ಳಿಯಲ್ಲಿ ನಡೆದಿದೆ.
ಬಸವರಾಜ್ ಶೇಖಪ್ಪ ಎಂಬುವವರ ಮನೆ ಗೃಹಪ್ರವೇಶ ಕಾರ್ಯಕ್ರಮ ನಿನ್ನೆ ನಡೆದಿತ್ತು. ನಿನ್ನೆ ಗೃಹಪ್ರವೇಶ ಕಾರ್ಯಕ್ರಮಕ್ಕೆ ಹೋಗಿ ಊಟ ಸೇವಿಸಿದ್ದ 30ಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥಗೊಂಡು ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಸ್ವಸ್ಥರನ್ನು ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ವಸ್ಥಗೊಂಡ ಎಲ್ಲರಿಗೂ ಚಿಕಿತ್ಸೆ ನೀಡಲಾಗಿದ್ದು, ಸಧ್ಯ ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ರಾಣೆಬೆನ್ನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.