ಬೆಂಗಳೂರು: ದೆಹಲಿಯಲ್ಲಿ ಇಂದು ನಡೆಯಲಿರುವ ಜಿ.ಎಸ್.ಟಿ. ಸಚಿವರ ಮಂಡಳಿ (ಗ್ರೂಪ್ ಆಫ್ ಮಿನಿಸ್ಟರ್ಸ್) ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೆರಳುತ್ತಿದ್ದು, ಇಂದು ಸಂಜೆಯೇ ಹಿಂದಿರುಗಲಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಇಂದು ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ಭವನದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದೇನೆ ಎಂದರು.
ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ದೆಹಲಿಯಲ್ಲಿ ಯಾರನ್ನೂ ಭೇಟಿಯಾಗುವ ಉದ್ದೇಶ ಇಲ್ಲ. ಇದೊಂದು ಅಲ್ಪಾವಧಿ ಭೇಟಿ ಎಂದು ತಿಳಿಸಿದರು.